Select Page

ಬಾಲಕನ ಕ್ಯಾನ್ಸರ್ ಚಿಕಿತ್ಸೆಗೆ 4 ಲಕ್ಷ ರೂ. ಚೆಕ್ ವಿತರಿಸಿದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್

ಬೆಳಗಾವಿ – 9 ವರ್ಷದ ಬಾಲಕನ ಕ್ಯಾನ್ಸರ್ ಚಿಕಿತ್ಸೆಗೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಅವರು ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ 4 ಲಕ್ಷ ರೂ. ಮಂಜೂರು ಮಾಡಿಸಿದ್ದು, ಈ ಕುರಿತು ಆದೇಶ ಪತ್ರವನ್ನು ಬಾಲಕನ ಕುಟುಂಬಕ್ಕೆ ಹಸ್ತಾಂತರಿಸಿದರು.

ಬೆಳಗಾವಿ ಗ್ರಾಮೀಣ ಕ್ಷೇತ್ರದ ಬೆನಕನಹಳ್ಳಿ ಗ್ರಾಮದ ದಂಡಕಲ್ಕರ್ ಕುಟುಂಬದ ಮಗು ಆದಿತ್ಯಾ ದಂಡಕಲ್ಕರ್ ಗೆ ಕ್ಯಾನ್ಸರ್ ಖಾಯಿಲೆ ಬಂದಿದೆ. ಚಿಕಿತ್ಸೆಗಾಗಿ ಸುಮಾರು 9 ಲಕ್ಷ ರೂ. ಖರ್ಚು ಮಾಡಿರುವ ಕುಟಂಬ ವೆಚ್ಚ ಭರಿಸಲಾಗದೆ ಸಂಕಷ್ಟದಲ್ಲಿದೆ. ಈ ಹಿನ್ನೆಲೆಯಲ್ಲಿ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಅವರು ವಿಶೇಷ ಪ್ರಯತ್ನ ಮಾಡಿ ಮುಖ್ಯಮಂತ್ರಿಯವರ ಪರಿಹಾರ ನಿಧಿಯ ವತಿಯಿಂದ 4 ಲಕ್ಷ ರೂ.ಗಳ ಪರಿಹಾರವನ್ನು ಮಂಜೂರು ಮಾಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪರಿಹಾರದ ಮಂಜೂರ ಪತ್ರವನ್ನು ಮಗುವಿನ ತಾಯಿಗೆ ಗ್ರಾಮದ ಮುಖಂಡರ ಸಮ್ಮುಖದಲ್ಲಿ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ಮುಖಂಡ ಚನ್ನರಾಜ ಹಟ್ಟಿಹೊಳಿ, ತಾಯಿ ಹೃದಯದ ಲಕ್ಷ್ಮಿ ಹೆಬ್ಬಾಳಕರ್ ಅವರು ಅಭಿವೃದ್ಧಿ ಕಾರ್ಯಗಳ ಜೊತೆಗೆ ಕ್ಷೇತ್ರದಲ್ಲಿ ಸಂಕಷ್ಟದಲ್ಲಿರುವ ಜನರಿಗೆ ಸ್ವಂತ ಹಾಗೂ ಸರಕಾರದಿಂದ ಸಾಕಷ್ಟು ಆರ್ಥಿಕ ಸಹಾಯ ಮಾಡುತ್ತಿದ್ದಾರೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಬೆನಕನಹಳ್ಳಿ ಗ್ರಾಮಸ್ಥರು ಉಪಸ್ಥಿತರಿದ್ದರು.

Advertisement

Leave a reply

Your email address will not be published. Required fields are marked *

error: Content is protected !!