
ಕೊಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ 10 ಸಾವಿರ ಕ್ಯೂಸೆಕ್ ನೀರು ಬಿಡುಗಡೆ

ಚಿಕ್ಕೋಡಿ: ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಾತಾರಾ ಜಿಲ್ಲೆಯಲ್ಲಿರುವ ಕೊಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ 10 ಸಾವಿರ ಕ್ಯೂಸೆಕ್ ನದಿಗೆ ಬಿಡುಗಡೆ ಮಾಡಲಾಗುತ್ತಿದೆ.
ಮಧ್ಯಾಹ್ನ 2 ಗಂಟೆಯಿಂದ ಕೊಯ್ನಾ ಆಡಳಿತ ಮಂಡಳಿ ನೀರು ಬಿಡುಗಡೆ ಮಾಡಲಾಗಿದೆ. ನೀರು ಬಿಡುಗಡೆ ಹಿನ್ನೆಲೆಯಲ್ಲಿ ಕೃಷ್ಣಾ ನದಿ ನೀರಿನಲ್ಲಿ ಏರಿಕೆಯಾಗುವ ಕಾರಣ ಕೃಷ್ಣಾ ನದಿ ತೀರದ ಜನರಿಗೆ ಎಚ್ಚರಿಕೆ ವಹಿಸಲು ಅಧಿಕಾರಿಗಳು ಸೂಚಿಸಿದ್ದಾರೆ.
ಕೃಷ್ಣಾ ಅಚ್ಚು ಕಟ್ಟು ಪ್ರದೇಶದಲ್ಲಿ ಭಾರಿ ಮಳೆ ಮುಂದುವರೆದರೆ ಮತ್ತೆ ಕೃಷ್ಣಾ ನದಿ ತೀರದಲ್ಲಿ ಪ್ರವಾಹದ ಆತಂಕ ಎದುರಾಗಲಿದೆ. 105 ಟಿಎಂಸಿ ಸಾಮರ್ಥ್ಯದ ಕೊಯ್ನಾ ಜಲಾಶಯ 103 ಟಿಎಂಸಿ ಗಳಷ್ಟು ಭರ್ತಿಯಾಗಿದೆ. ಸಧ್ಯ ಕೊಯ್ನಾ ಜಲಾನಯನ ಪ್ರದೇಶದಲ್ಲಿ 57 ಮಿ.ಮೀ ಗಳಷ್ಟು ಮಳೆಯಾಗಿದ್ದು ಇನ್ನೂ ನಾಲ್ಕು ದಿನಗಳ ಕಾಲ ಮಳೆಯಾಗಲಿದೆ ಎನ್ನುವ ಮುನ್ಸೂಚನೆಯನ್ನ ಹವಾಮಾನ ಇಲಾಖೆ ನೀಡಿದೆ. ಅದರ ಜೊತೆಗೆ ಕೃಷ್ಣಾ ಅಚ್ಚು ಕಟ್ಟು ಪ್ರದೇಶದಲ್ಲು ಮಳೆಯಾಗುತ್ತಿರುವ ಕಾರಣ ಕೃಷ್ಣಾ ನದಿ ನೀರಿನ ಒಳ ಹರಿವಿನ ಪ್ರಮಾಣ ಹೆಚ್ಚಾಗಲಿದೆ.