ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ; ಹೇಗೆ ನೋಡುವುದು ಗೊತ್ತಾ?
ಬೆಂಗಳೂರು : ಏಪ್ರಿಲ್ 21 ರ ಶುಕ್ರವಾರ ಬೆಳಗ್ಗೆ ದ್ವಿತೀಯ ಪಿಯು ಫಲಿತಾಂಶ ಪ್ರಕಟವಾಗಲಿದೆ. ಮಾರ್ಚ್ ತಿಂಗಳಿನಲ್ಲಿ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ನಾಳೆ ಪ್ರಕಟವಾಗಲಿದೆ.
ನಿಮ್ಮ ಫಲಿತಾಂಶ ವೀಕ್ಷಿಸಲು ಈ ಕೆಳಗಿನ ಲಿಂಕ್ ಒತ್ತಿ
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಆದೇಶ ಹೊರಡಿಸಿದೆ. ನಾಳೆ ಬೆಳಗ್ಗೆ 10 ಗಂಟೆಗೆ ಪರೀಕ್ಷಾ ಮಂಡಳಿಯಿಂದ ಸುದ್ದಿಗೋಷ್ಟಿ ನಡೆಸಲಾಗುತ್ತದೆ. ನಂತರ ಫಲಿತಾಂಶವನ್ನು ಅಧಿಕೃತ ವೆಬ್ಸೈಟ್‌ನಲ್ಲಿ ಪ್ರಕಟ ಮಾಡಲಾಗುತ್ತದೆ ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ರಾಜ್ಯದಲ್ಲಿ ಮಾ.9 ರಿಂದ ಮಾ.29ರವರೆಗೆ ನಡೆದಿದ್ದ ದ್ವಿತೀಯ ಪಿಯು ಪರೀಕ್ಷೆಯ ಫಲಿತಾಂಶಕ್ಕೆ ಕ್ಷಣಗಣನೆ ಆರಂಭವಾಗಿದೆ. ಒಟ್ಟು 7.26 ಲಕ್ಷ ದ್ವಿತೀಯ ಪಿಯು ವಿದ್ಯಾರ್ಥಿಗಳ ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದರು. ಅದರಲ್ಲಿ ಶೇ.6 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದು, ಉಳಿದಂತೆ ಎಲ್ಲ ವಿದ್ಯಾರ್ಥಿಗಳು ಕೂಡ ಪರೀಕ್ಷೆಯನ್ನು ಬರೆದಿದ್ದರು.