ಬೆಳಗಾವಿ – ಭೀಕರ ಅಗ್ನಿ ಅವಘಡ ; ಹೊತ್ತಿ ಉರಿಯುತ್ತಿರುವ ಕಾರ್ಖಾನೆ
ಬೆಳಗಾವಿ : ನಗರದ ಹೊರವಲಯದ ನಾವಗೆ ಗ್ರಾಮದಲ್ಲಿರುವ ಸ್ನೇಹಂ ಕಾರ್ಖಾನೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಸುಮಾರು ಜನ ಕಾರ್ಮಿಕರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ.
ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡಿದ್ದು ಇಡೀ ಕಾರ್ಖಾನೆಗೆ ಬೆಂಕಿ ಹೊತ್ತಿಕೊಂಡಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಬಂದಿದ್ದು ಬೆಂಕಿ ನಂದಿಸುತ್ತಿದ್ದಾರೆ.
ಗಾಯಾಳುಗಳಿಗೆ ಚಿಕಿತ್ಸೆ ನೀಡಲು ಜಿಲ್ಲಾಸ್ಪತ್ರೆಯಲ್ಲಿ ಸಿದ್ಧತೆ ಮಾಡಿಕೊಂಡಿರುವುದಾಗಿ ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದು ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.


