ಬೆಳಗಾವಿ : ಕೊಲ್ಕತ್ತಾದಲ್ಲಿ ಸ್ಥಾನಿಕ ವೈದ್ಯೆಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ವಿರೋಧಿಸಿ ಕೆಎಲ್ಇ ಸಂಸ್ಥೆಯ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರದ ಹೊರರೋಗಿ ವಿಭಾಗವು ದಿ.17 ರ ಶನಿವಾರ ಕಾರ್ಯನಿರ್ವಹಿಸುವುದಿಲ್ಲ.

ಅಪಘಾತ ಮತ್ತು ತುರ್ತು ವೈದ್ಯಕೀಯ ಸೇವೆ, ವಾರ್ಡಗಳು, ಲ್ಯಾಬೊರೆಟರಿ(ಪ್ರಯೋಗಾಲಯ) ಎಂದಿನಂತೆ ಕಾರ್ಯನಿರ್ವಹಿಸಲಿವೆ ಎಂದು ವೈದ್ಯಕೀಯ ನಿರ್ದೇಶಕ ಡಾ. (ಕರ್ನಲ್) ಎಂ ದಯನಾಂದ ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ.