Select Page

Advertisement

ಭೀಕರ ರಸ್ತೆ ಅಪಘಾತ ; ಒಂದೇ ಕುಟುಂಬದ ನಾಲ್ವರು ಸಾವು

ಭೀಕರ ರಸ್ತೆ ಅಪಘಾತ ; ಒಂದೇ ಕುಟುಂಬದ ನಾಲ್ವರು ಸಾವು

ಗದಗ : ಬಸ್ ಹಾಗೂ ಕಾರಿನ ಮಧ್ಯೆ ಅಪಘಾತ ಸಂಭವಿಸಿದ್ದು ಘಟನೆಯಲ್ಲಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಘಟನೆ ಗದಗ ಜಿಲ್ಲೆ ಕೊಣ್ಣೂರ ಹೊರವಲಯದಲ್ಲಿ ಇಂದು ಬೆಳಿಗ್ಗೆ ನಡೆದಿದೆ.

ಈ ದುರ್ಘಟನೆಯಲ್ಲಿ ಹಾವೇರಿ ಮೂಲದ ರುದ್ರಪ್ಪ ಅಂಗಡಿ ( 55 ) ಪತ್ನಿ ರಾಜೇಶ್ವರಿ ( 45 ) ಮಗಳು ಅಶ್ವರ್ಯ ( 16 )
ಮಗ ವಿಜಯ ( 12 ) ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಕಲ್ಲಾಪುರ ಬಸವೇಶ್ವರ ದೇವರ ದರ್ಶನಕ್ಕೆ ಹೊರಟಿದ್ದ ಕುಟುಂಬಸ್ಥರು ಇದ್ದ ಕಾರು‌ ಇಳಕಲ್ ನಿಂದ ಹುಬ್ಬಳ್ಳಿಗೆ ಹೊರಟಿದ್ದ ಬಸ್ ಗೆ ಡಿಕ್ಕಿಯಾದ ಪರಿಣಾಮ ಈ ಅವಘಡ ಸಂಭವಿಸಿದೆ.

ನರಗುಂದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು,
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದ್ದಾರೆ.

Advertisement

Leave a reply

Your email address will not be published. Required fields are marked *

error: Content is protected !!