ನಲಪಾಡ್ ಹೆಸರು ಹೇಳಿ ವಿದ್ಯಾರ್ಥಿ ಕಿಡ್ನ್ಯಾಪ್ ; ಹಲ್ಲೆ ಆರೋಪದ ಪ್ರಕರಣ
ಬೆಂಗಳೂರು : ಕಾಂಗ್ರೆಸ್ ಯುವ ಘಟಕದ ಅಧ್ಯಕ್ಷ ಮೊಹಮ್ಮದ್ ನಲಪಾಡ್ ಹೆಸರು ಹೇಳಿಕೊಂಡು ವಿದ್ಯಾರ್ಥಿಯನ್ನು ಅಪಹರಣ ಮಾಡಿದ್ದಲ್ಲದೇ ಹಲ್ಲೆ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ.
ಜೀವನ್ ಜೈನ್ ಎಂಬ ವಿದ್ಯಾರ್ಥಿ ಕೆಂಗೆರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ಅಪಹರಣ ಮತ್ತು ಹಲ್ಲೆ ನಡೆಸಲಾಗಿದೆ ಎಂದು ದೂರಿನಲ್ಲಿ ಯುವಕ ಉಲ್ಲೇಖಿಸಿದ್ದಾನೆ.
ಖಾಸಗಿ ಕಾಲೇಜಿನಲ್ಲಿ ಬಿಬಿಎ ಓದುತ್ತಿರುವ ಜೀವನ್ ಎಂಬ ವಿದ್ಯಾರ್ಥಿ ಕಳೆದ ವರ್ಷ ಆಯುಷ್ ಶ್ರೀನಿವಾಸ ಎಂಬಾತನ ಬಳಿ ಮೂರು ಲಕ್ಷ ಸಾಲ ಪಡೆದಿದ್ದ. ಆ ಹಣ ವಾಪಸ್ ಕೊಡಲಾಗದೆ ಪರದಾಡುತ್ತಿದ್ದ, ಜೊತೆಗೆ ಯುವಕನನ್ನು ಕಿಡ್ನ್ಯಪ್ ಮಾಡಿ ಬೆದರಿಸಲಾಗಿದೆ ಎಂದು ಆರೋಪಿಸಲಾಗಿದೆ.
ಬೆಂಗಳೂರು ನಗರ ಪೊಲೀಸ್ ಕಮಿಷನರ್ ಅವರಿಗೆ ಮೇಲ್ ಮೂಲಕ ದೂರು ದಾಖಲಿಸಿರುವ ಯುವಕ ನನ್ನನ್ನು ಕಿಡ್ನ್ಯಾಪ್ ಮಾಡಿ ಹಲ್ಲೆ ನಡೆಸಿದ್ದಾರೆ. ಜೊತೆಗೆ ಆರು ಲಕ್ಷ ಹಣ ಪಡೆದುಕೊಂಡು ಇನ್ನೂ ನೀಡುವಂತೆ ಬೆದರಿಸುತ್ತಿದ್ದಾರೆ ಎಂದು ಆರೋಪಿಸಲಾಗಿದೆ.


