ಡಿಕೆಶಿಗೆ ಸಂಕಷ್ಟ ; ಲೋಕಾಯುಕ್ತ ಪೊಲೀಸರಿಂದ ನೋಟಿಸ್
ಬೆಂಗಳೂರು : ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಸಂಕಷ್ಟಕ್ಕೆ ಸಿಲುಕಿರುವ ಸಮಯದಲ್ಲೇ ಸಧ್ಯ ಡಿಸಿಎಂ ಡಿ.ಕೆ ಶಿವಕುಮಾರ್ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಈ ಮಧ್ಯೆ ಕಾಂಗ್ರೆಸ್ ನಲ್ಲಿ ತನಿಖೆಯ ಗೊಂದಲ ಸೃಷ್ಟಿಯಾದಂತೆ ಕಾಣುತ್ತಿದೆ.
ಹೌದು ಅಕ್ರಮ ಆಸ್ತಿಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ನೋಟಿ ನೀಡಿ ಇಂದೇ ವಿಚಾರಣೆಗೆ ಹಾಜರಾಗುವಂತೆ ತಿಳಿಸಿದ್ದರು. ಈ ಹಿನ್ನಲೆಯಲ್ಲಿ ಡಿಕೆಶಿ ವಿಚಾರಣೆಗೆ ಹಾಜರಾಗಿದ್ದಾರೆ.
ಈ ನಡುವೆ ಇಂದು ಸಿಎಂ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಸಿದೆ. ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಮೇಲೆ ಬಂದಿರುವ ಆರೋಪದ ಕುರಿತು ಶಾಸಕರಿಗೆ ಮನವರಿಕೆ ಮಾಡುವುದು ಅಷ್ಟೇ ಅಲ್ಲದೆ, ವಿಪಕ್ಷಗಳ ಮೇಲೆ ಮುಗಿಬೀಳುವ ಕುರಿತು ಮನವರಿಕೆ ಮಾಡುವ ಇದ್ದೇಶ ಈ ಸಭೆಯಲ್ಲಿ ಇದೆ ಎನ್ನಲಾಗಿದೆ.


