Select Page

Advertisement

ರಾಯಬಾಗ ಪಟ್ಟಣದಲ್ಲಿ ರಿಂಗ್ ರೋಡ್ ; ಏನಂದ್ರು ಸಂಸದೆ ಪ್ರಿಯಾಂಕಾ

ರಾಯಬಾಗ ಪಟ್ಟಣದಲ್ಲಿ ರಿಂಗ್ ರೋಡ್ ; ಏನಂದ್ರು ಸಂಸದೆ ಪ್ರಿಯಾಂಕಾ

ರಾಯಬಾಗ : ತಾಲೂಕಿನಲ್ಲಿ ಸಕ್ಕರೆ ಕಾರ್ಖಾನೆಗಳು ಇರುವದರಿಂದ ಕಬ್ಬು ಹಂಗಾಮಿನಲ್ಲಿ ಉಂಟಾಗುವ ವಾಹನ ದಟ್ಟಣೆ ತಪ್ಪಿಸಲು ಸಚಿವ ಸತೀಶ ಜಾರಕಿಹೊಳಿಯವರ ಮಾರ್ಗದರ್ಶನದಲ್ಲಿ ಕೇಂದ್ರ ಸಾರಿಗೆ ಸಚಿವರಿಗೆ ರಿಂಗ್‌ರೋಡ ನಿರ್ಮಾಣಕ್ಕಾಗಿ ಬೇಡಿಕೆ ಸಲ್ಲಿಸಲಾಗಿದೆ ಎಂದು ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಮಾಹಿತಿ ನೀಡಿದ್ದಾರೆ.

ತಾಲೂಕಿನಲ್ಲಿ ಮಳೆಯ ಅಭಾವದಿಂದ ನೀರಿಗಾಗಿ ಜನ ಪರದಾಡುವ ಪರಿಸ್ಥಿತಿ ಇದ್ದು ಯಾರಿಗೂ ತೊಂದರೆ ಆಗದಂತೆ ಕಾಲುವೆಗಳ ಮೂಲಕ ನೀರು ಹರಿಸಲಾಗುವುದು ಎಂದು ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಹೇಳಿದರು.

ಬುಧವಾರ ಪಟ್ಟಣದ ಹುಲ್ಯಾಳ ಹಾಗೂ ಬಿರನಾಳ ಕೆರೆಗೆ ವಿಶೇಷ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿ ಮಾತನಾಡಿದ ಅವರು. ಮಳೆಯ ಅಭಾವದಿಂದ ಜನ ಜಾನುವಾರುಗಳಿಗೆ ಕುಡಿಯುವ ನೀರಿನ ತೊಂದರೆಯಾಗದಂತೆ ಘಟಪ್ರಭಾ ಎಡದಂಡೆ ಕಾಲುವೆ ಮುಖಾಂತರ ಕೆರೆಗಳನ್ನು ನೀರು ತುಂಬಿಸುವ ಪ್ರಯತ್ನ ಮಾಡಲಾಗಿದ್ದು ಯಾವುದೇ ಸಮಸ್ಯೆ ಆಗದಂತೆ ‌ಕ್ರಮ ವಹಿಸಲಾಗಿದೆ ಎಂದರು.

ತಾಲೂಕಿನಲ್ಲಿ ಸಕ್ಕರೆ ಕಾರ್ಖಾನೆಗಳು ಇರುವದರಿಂದ ಕಬ್ಬು ಹಂಗಾಮಿನಲ್ಲಿ ಉಂಟಾಗುವ ವಾಹನ ದಟ್ಟಣೆ ತಪ್ಪಿಸಲು ಸಚಿವ ಸತೀಶ ಜಾರಕಿಹೊಳಿಯವರ ಮಾರ್ಗದರ್ಶನದಲ್ಲಿ ಕೇಂದ್ರ ಸಾರಿಗೆ ಸಚಿವರಿಗೆ ರಿಂಗ್‌ರೋಡ ನಿರ್ಮಾಣಕ್ಕಾಗಿ ಬೇಡಿಕೆ ಸಲ್ಲಿಸಲಾಗಿದೆ. ಎಮ್.ಪಿ.ಅನುದಾನದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ತಹಶೀಲ್ದಾರ ಸುರೇಶ ಮುಂಜೆ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಹಾವೀರ ಮೊಹಿತೆ, ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ನಿರ್ಮಲಾ ಪಾಟೀಲ, ಬ್ಲಾಕ್ ಕಾಂಗ್ರೆಸ್ಸ ಅಧ್ಯಕ್ಷ ಸಿದ್ದು ಬಂಡಗರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Advertisement

Leave a reply

Your email address will not be published. Required fields are marked *

error: Content is protected !!