ಬೆಂಗಳೂರು : ಹೆಚ್.ಡಿ ರೇವಣ್ಣ ಹಾಗು ಆತನ ಪುತ್ರ ಕಾಮುಕ ಪ್ರಜ್ವಲ್ ರೇವಣ್ಣ ಇಬ್ಬರೂ ಕಚ್ಚೆ ಹರುಕರು ಎಂಬುದು ದೋಷಾರೋಪ ಪಟ್ಟಿಯಲ್ಲಿ ಉಲ್ಲೇಖ ಮಾಡಲಾಗಿದೆ. ಜೊತೆಗೆ ಜೋಡಿ ಕಾಮ ಪುರಾಣವೂ ಬಯಲಾಗಿದೆ.

ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ವಿರುದ್ಧ ಮೊದಲ ಚಾರ್ಜ್‌ಶೀಟ್‌ ಸಲ್ಲಿಕೆಯಾಗಿದೆ. 2,144 ಪುಟಗಳ ದೋಷಾರೋಪ ಪಟ್ಟಿಯನ್ನು 42 ನೇ ಜನಪ್ರತಿನಿಧಿ ನ್ಯಾಯಾಲಯಕ್ಕೆ ಎಸ್‌ಐಟಿ (SIT) ಸಲ್ಲಿಸಿದೆ.

ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಅಪ್ಪ, ಮಗನ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಕೆಯಾಗಿದೆ. ಅಪ್ಪ ಹೆಚ್.ಡಿ.ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ ಹಾಗೂ ಮಗ ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ.

ಮನೆ ಕೆಲಸ ಸಂತ್ರಸ್ತ ಮಹಿಳೆಗೆ ರೇವಣ್ಣ ಮನೆಯಲ್ಲಿ ಮೈ ಕೈ ಮುಟ್ಟಿ ದೌರ್ಜನ್ಯ ಎಸಗಿದ್ದಾರೆ. ಹಣ್ಣು ಕೊಡುವ ನೆಪದಲ್ಲಿ ಸೊಂಟ ಚಿವುಟಿ, ಸೀರೆ ಎಳೆದು ಪ್ರಜ್ವಲ್ ದೌರ್ಜನ್ಯವೆಸಗಿದ್ದಾರೆ ಎಂದು ಉಲ್ಲೇಖಿಸಲಾಗಿದೆ.

ಮಗ ಪ್ರಜ್ವಲ್ ವಿರುದ್ಧ ಅತ್ಯಾಚಾರ, ಹೊಳೆನರಸೀಪುರ ಮನೆಯಲ್ಲಿ ನಿರಂತರವಾಗಿ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಬೆಂಗಳೂರಿನ ಬಸವನಗುಡಿ ಮನೆಯಲ್ಲೂ ಅತ್ಯಾಚಾರ ನಡೆಸಿರೋದಾಗಿ ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖ ಮಾಡಲಾಗಿದೆ.

ಸಂತ್ರಸ್ತ ಮಹಿಳೆಯನ್ನ ರೂಮಿಗೆ ಕರೆಯುತ್ತಿದ್ದರು. ಹಣ್ಣು ಕೊಡುವ ನೆಪದಲ್ಲಿ ಲೈಂಗಿಕ ಕಿರುಕುಳ ನೀಡಿದ್ದಾರೆ. ಮೈ ಕೈ ಮುಟ್ಟಿ, ಹತ್ತಿರಕ್ಕೆ ಎಳೆದುಕೊಂಡು ಲೈಂಗಿಕ ಕಿರುಕುಳ ನೀಡಿದ್ದಾರೆ. ಕಲಂ 354, 354 (ಎ) ಐಪಿಸಿ ಅಡಿ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ.