Select Page

Advertisement

ಅಥಣಿಯಲ್ಲಿ ಭೀಕರ ರಸ್ತೆ ಅಪಘಾತದಲ್ಲಿ ಬಾಲಕ ಸಾವು ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಅಥಣಿಯಲ್ಲಿ ಭೀಕರ ರಸ್ತೆ ಅಪಘಾತದಲ್ಲಿ ಬಾಲಕ ಸಾವು ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಅಥಣಿ : ಮೂತ್ರ ವಿಸರ್ಜನೆಗೆ ಬಂದ ಶಾಲಾ ಬಾಲಕನ ಮೇಲೆ ಸರ್ಕಾರಿ ಬಸ್ ಹರಿದು ವಿದ್ಯಾರ್ಥಿ ಸ್ಥಳದಲ್ಲೆ ಸಾವನಪ್ಪಿರುವ ಘಟನೆ ಅಥಣಿ ಪಟ್ಟಣದಲ್ಲಿ ನಡೆದಿದೆ.

ಸುನಿಲ್ ಬಂಡಗರ (10) ಮೃತ ದುರಾದೈವಿಯಾಗಿದ್ದು. ಬಾಲಕ ಪಟ್ಟಣದ ಗಲಗಲಿ ಆಸ್ಪತ್ರೆ ಬಳಿ ಟ್ಯೂಷನ್ ಗೆ ಎಂದು ಬಂದಿದ್ದ. ಮಧ್ಯಾಹ್ನ ಗೆಳೆಯರೊಂದಿಗೆ ಮೂತ್ರ ವಿಸರ್ಜನೆಗೆಂದು ರಸ್ತೆ ಬದಿ ನಿಂತಿದ್ದ ಸಂದರ್ಭದಲ್ಲಿ ಬಸ್ ಹರಿದು ಬಾಲಕ ಸಾವಣಪ್ಪಿದ್ದಾನೆ.

ಘಟನೆಗೆ ಬಸ್ ಚಾಲಕನ ಅಜಾಗರೂಕತೆ ಕಾರಣವಾಗಿದೆ.
ರಸ್ತೆ ಪಕ್ಕದಲ್ಲೇ ನಿಂತಿದ್ದ ಶಾಲಾ‌ ಮಕ್ಕಳನ್ನು ಗಮನಿಸದೆ ಬಸ್ ಮೇಲೆ ಹತ್ತಿಸಿದ್ದು ಬಾಲಕ ಸಾವಣಪ್ಪಿದ್ದಾನೆ.

ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೇರಿಯಾಗಿದ್ದು ಘಟನಾ ಸ್ಥಳಕ್ಕೆ ಅಥಣಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಾಲಕನನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

Advertisement

Leave a reply

Your email address will not be published. Required fields are marked *

error: Content is protected !!