Select Page

Advertisement

ಸಚಿವರ ನಡೆ ಜನರ ಮನೆ ಬಾಗಿಲ ಕಡೆ : ಹೊಸ ಸಂಪ್ರದಾಯಕ್ಕೆ ನಾಂದಿ

ಸಚಿವರ ನಡೆ ಜನರ ಮನೆ ಬಾಗಿಲ ಕಡೆ : ಹೊಸ ಸಂಪ್ರದಾಯಕ್ಕೆ ನಾಂದಿ

ಬೆಳಗಾವಿ : ಜನರ ಸಮಸ್ಯೆ ಆಲಿಸಿ ತ್ವರಿತವಾಗಿ ಪರಿಹಾರ ನೀಡುವ ನಿಟ್ಟಿನಲ್ಲಿ ಖುದ್ದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ವಿನೂತನ ಕಾರ್ಯಕ್ರಮ ಆಯೋಜಿಸಿದ್ದಾರೆ. ಬೆಳಗಾವಿ ಗ್ರಾಮೀಣ ಕ್ಷೇತ್ರದ ಹಳ್ಳಿ ಹಳ್ಳಿಗೆ ತೆರಳಿ ಸಮಸ್ಯೆ ಆಲಿಸಿ ಪರಿಹಾರ ನೀಡುವ ನಿಟ್ಟಿನಲ್ಲಿ ಕಾರ್ಯಕ್ರಮ ಪ್ರಾರಂಭಿಸಿದ್ದಾರೆ.

ಸೋಮವಾರ ನಂದಿಹಳ್ಳಿ ಗ್ರಾಮಕ್ಕೆ ತೆರಳಿದ ಸಚಿವರು ಜನರ ಅಹವಾಲುಗಳನ್ನು ಆಲಿಸಿದರು. ಈ ವಾರ ಪೂರ್ತಿ ಹಳ್ಳಿ ಭೇಟಿ ಮುಂದುವರಿಸಲಿರುವ ಅವರು, ಜನರ ಮನೆ ಬಾಗಿಲಿಗೆ ಸಚಿವರೊಬ್ಬರು ತೆರಳಿ ಸಮಸ್ಯೆ ಕೇಳುವ ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಿದ್ದಾರೆ. ಸಚಿವರ ಮನೆ ಬಾಗಿಲಿಗೆ ಜನರು ಸಮಸ್ಯೆ ಹೊತ್ತು ಬರುವುದನ್ನು ತಪ್ಪಿಸಲು ಸಚಿವರೇ ಜನರ ಮನೆ ಬಾಗಿಲಿನತ್ತ ಹೆಜ್ಜೆ ಹಾಕುತ್ತಿರುವುದಕ್ಕೆ ಕ್ಷೇತ್ರದಲ್ಲಿ ಭಾರೀ ಶ್ಲಾಘನೆ ವ್ಯಕ್ತವಾಗಿದೆ.

ನಂದಿಹಳ್ಳಿ ಗ್ರಾಮಸ್ಥರನ್ನು ಭೇಟಿಮಾಡಿ ಸಮಸ್ಯೆ ಆಲಿಸಿದ ನಂತರ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿ ಶಾಲೆಗಳಲ್ಲಿ ಕೊಠಡಿಗಳ ನಿರ್ಮಾಣಕ್ಕೆ 5 ಕೋಟಿ ರೂಪಾಯಿ ಮೀಸಲಿಡಲಾಗುತ್ತಿದೆ. ಗ್ರಾಮೀಣ ಭಾಗದ ಶಾಲೆಗಳ ಅಭಿವೃದ್ಧಿಯೇ ನನ್ನ ಗುರಿ. ಇದರಲ್ಲಿ ಯಾವುದೇ ರಾಜಕೀಯ ಮಾಡಬಾರದು. ಶಾಲೆಗೆ ಅಗತ್ಯವಿರುವ ಅತಿಥಿ ಶಿಕ್ಷಕರ ನೇಮಕ ಮಾಡಲು ಈಗಾಗಲೇ ಕ್ಷೇತ್ರದ ಶಿಕ್ಷಣಾಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಹೇಳಿದರು.

ಗ್ರಾಮಗಳ ಅಭಿವೃದ್ಧಿ ಸೇರಿದಂತೆ ಸರ್ವಜನಾಂಗಗಳ ಏಳಿಗೆಗಾಗಿ ಹಗಲಿರುಳು ಶ್ರಮಿಸಲು ಬದ್ದಳಾಗಿದ್ದೇನೆ. ಮರಾಠಿ ಶಾಲೆಗಳ ಅಭಿವೃದ್ಧಿಗೂ ನಾನು ಪ್ರಾಮಾಣಿಕ ಪ್ರಯತ್ನ ಮಾಡುವೆ. ಜನರ ಸಮಸ್ಯೆ ಆಲಿಸುವ ನಿಟ್ಟಿನಲ್ಲಿ ಈ ವಾರ ನಾನೇ ಗ್ರಾಮಗಳಿಗೆ ಭೇಟಿ ನೀಡಲಿದ್ದೇನೆ. ಮತ ಹಾಕಿ ನಮ್ಮ ಗೆಲುವುಗೆ ಪಾತ್ರರಾದವರ ಸೇವೆ ನಿರಂತರ ಮುಂದುವರಿಯುತ್ತದೆ ಎಂದರು.

ಈ ವೇಳೆ ಯುವರಾಜ ಕದಂ, ರೇಖಾ ಶಿಂಗೆನ್ನವರ್, ಮಹಾದೇವ ಜಾಧವ್, ಶಶಿಕಾಂತ್ ಪಾಟೀಲ್, ಸಹದೇವ ಬೆಳಗಾಂವಕರ, ರಾಮದಾಸ್ ಜಾಧವ್, ಸಂಜೀವ್ ಮಾಧರ, ಮಲ್ಲಿಕಾರ್ಜುನ ಲೋಕುರ,, ಮಾರುತಿ ಲೋಕುರ, ಗಣಪತಿ ಜಾಧವ್, ಅಶೋಕ್ ಜಾಧವ್, ಪರಶುರಾಮ್ ಜಂಗಳೆ, ನಿಂಗಪ್ಪ ಹಂಪಣ್ಣವರ, ನೀಲವ್ವ ಬಾಚೂಕರ, ರೇಖಾ ಮಾದರ, ಯಲ್ಲಪ್ಪ ಹಗೆದಾಳ, ವಸಂತ ಗೋರೆ, ಡಾ.ಕಿರಣ್ ಲೊಂಡೆ ಸೇರಿದಂತೆ ಹಲವು ಮಂದಿ ಉಪಪಸ್ಥಿತರಿದ್ದರು.


ಇದಾದ ನಂತರ ಬೆಳಗಾವಿ ಗ್ರಾಮೀಣ ಕ್ಷೇತ್ರದ ರಾಜಹಂಸಗಡದಲ್ಲಿ ಜನಸ್ಪಂದನ ಕಾರ್ಯಕ್ರಮ ನಡೆಸಿದ ಸಚಿವರು, ಅಹವಾಲು ಸ್ವೀಕರಿಸಿದರು. ಜನಸ್ಪಂದನೆಯ ಮೂಲಕ ಜನರ ಸಂಕಷ್ಟಗಳನ್ನು ಆಲಿಸುವುದು ನನ್ನ ಕರ್ತವ್ಯ, ಮನವಿ ಸ್ಖುದ್ದಾಪರಿಹಾರ ಒದಗಿಸುವುದು ನನಬದ್ಧವಗಿದೆ ಎಂದು ತಿಳಿಸಿದರು. ಸಾಧ್ಯವಾದಷ್ಟು ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಒದಗಿಸುವ ಕೆಲಸವನ್ನು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮಾಡಿದರು.

Advertisement

Leave a reply

Your email address will not be published. Required fields are marked *

error: Content is protected !!