ಚಿಕ್ಕೋಡಿ : ಶಾಲೆಯಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ, ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕನೋರ್ವನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬೆಳಗಾವಿ ಜಿಲ್ಲೆ ಚಿಕ್ಕೋಡಿ ಪೊಲೀಸ್ ಠಾಣಾ ವ್ಯಾಪ್ತಿಯ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿನಿಯರಿಗೆ ಶಿಕ್ಷಕ ಲೈಂಗಿಕ ಕಿರುಕುಳ ನೀಡುತ್ತಿದ್ದ ಎಂಬ ಆರೋಪ ಹಿನ್ನೆಲೆ ಆರೋಪಿ ಸಾದಿಕ ಬೇಗ್ ಚಿಕ್ಕೋಡಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಶುಕ್ರವಾರ ಸಂಜೆ ವಿದ್ಯಾರ್ಥಿನಿ ಶಾಲೆಯಿಂದ ಅಳುತ್ತಾ ಮರಳಿದ ಮನೆಗೆ ತೆರಳಿದಳು, ಪೋಷಕರು ಪ್ರಶ್ನಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಬಾಲಕಿಯ ತಂದೆ ಇತರೆ ಪೋಷಕರಿಗೆ ಮಾಹಿತಿ ನೀಡಿ ವಿಚಾರಿಸಿದಾಗ ಹತ್ತಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಗೆ ಈ ಕಾಮುಕ ಶಿಕ್ಷಕ ಲೈಂಗಿಕ ಕಿರುಕುಳ ನೀಡಿದ್ದ ಎಂಬ ಮಾಹಿತಿ ಲಭ್ಯವಾಗಿದೆ‌.

ಉಳಿದ ಪೋಷಕರು ಸಹ ದೂರು ನೀಡಲು ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ. ಸದ್ಯ ಆರೋಪಿ ಶಿಕ್ಷಕನ ವಶಕ್ಕೆ ಪಡೆದ ಚಿಕ್ಕೋಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.