ಬೆಳಗಾವಿ : ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಪೊಲೀಸ್ ಪೇದೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ಮಂಗಳವಾರ ಮೃತಪಟ್ಟಿದ್ದಾನೆ.
ಮೂಲತಃ ಅಥಣಿ ತಾಲೂಕಿನ ಸಪ್ತಸಾಗರ ಗ್ರಾಮದ ಚಂದ್ರಕಾಂತ ಗೌರಜ್ ( 36 ) ಮೃತ ಪೊಲೀಸ್ ಪೇದೆ, ಅಥಣಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ.
ಮೃತರ ಅಂತ್ಯಕ್ರಿಯೆ ಬುಧವಾರ ಸ್ವಗ್ರಾಮದಲ್ಲಿ ಸಕಲ ಸರ್ಕಾರಿ ಗೌರವದೊಂದಿಗೆ ನೆರವೇರಿತು.