Select Page

Advertisement

ಬೆಳಗಾವಿ : ಗಣೇಶೋತ್ಸವ ಮೆರವಣಿಗೆ ವೇಳೆ ಹರಿದ ರಕ್ತ ; ಮೂವರಿಗೆ ಗಂಭೀರ ಗಾಯ

ಬೆಳಗಾವಿ : ಗಣೇಶೋತ್ಸವ ಮೆರವಣಿಗೆ ವೇಳೆ ಹರಿದ ರಕ್ತ ; ಮೂವರಿಗೆ ಗಂಭೀರ ಗಾಯ

ಬೆಳಗಾವಿ : ಜಿಲ್ಲಾಡಳಿತ ಹಾಗೂ ನಗರ ಪೊಲೀಸ್ ಇಲಾಖೆ ಗಣೇಶೋತ್ಸವದ ವಿಸರ್ಜನೆಯ ವೇಳೆ ಯಾವುದೇ ಅನಾಹುತ ನಡೆಯದಂತೆ ಹದ್ದಿನ ಕಣ್ಣಿಟ್ಟಿದ್ದರೂ ಬೆಳಗಾವಿಯ ಮೂವರು ಯುವಕರ ಮೇಲೆ ಅಪರಿಚಿತರಿಂದ ಚಾಕು ಇರಿತ ಘಟನೆ ಬುಧವಾರ ನಸುಕಿನ ಜಾವ ನಡೆದಿದೆ.

ಗಣೇಶ ವಿಸರ್ಜನಾ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ಯುವಕರ ಮೇಲೆ ದಾಳಿ ನಡೆಸಿ ಪರಾರಿಯಾಗಿರುವ ಅಪರಿಚಿತರ ಶೋಧ ಕಾರ್ಯ ಪೊಲೀಸರು‌ ನಡೆಸುತ್ತಿದ್ದಾರೆ. ಎಪಿಎಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಬೆಳಗಾವಿಯ ಚೆನ್ನಮ್ಮ ವೃತ್ತದಲ್ಲಿ ಯುವಕರಿಂದ ಅಪರಿಚಿತರಿಂದ ಏಕಾಏಕಿ ದಾಳಿ ನಡೆಸಿದ್ದಾರೆ. ಘಟ‌ನೆಯಲ್ಲಿ ದರ್ಶನ್ ಪಾಟೀಲ, ಸತೀಶ ಪೂಜಾರಿ, ಪ್ರವೀಣ್ ಗುಂಡ್ಯಾಗೋಳಗೆ ಗಂಭೀರ ಗಾಯವಾಗಿ ಜಿಲ್ಲಾಸ್ಪತ್ರೆಯಲ್ಲಿ‌ ಚಿಕಿತ್ಸೆ ಪಡೆಯುತ್ತಿದ್ದಾರೆ.

ಗಣಪತಿ ವಿಸರ್ಜನಾ ಮೆರವಣಿಯಲ್ಲಿ ಪಾಲ್ಗೊಂಡಿದ್ದ ಮೂವರು ಯುವಕರು ಡಿಜೆಗೆ ಕುಣಿದು ಕುಪ್ಪಳಿಸುವ ವೇಳೆ ಮೂವರು ಯುವಕರ ಮೇಲೆ ಏಕಾಏಕಿ ದಾಳಿ ನಡೆಸಿದ್ದಾರೆ.
ಬೆಳಗಾವಿ ಜಿಲ್ಲಾಸ್ಪತ್ರೆಗೆ ಎಪಿಎಂಸಿ ಠಾಣೆ ಪೊಲೀಸರ ಭೇಟಿ, ಘಟ‌ನೆ ಬಗ್ಗೆ ಮಾಹಿತಿ ಸಂಗ್ರಹ ಬೆಳಗಾವಿಯ ಎಪಿಎಂಸಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Advertisement

Leave a reply

Your email address will not be published. Required fields are marked *

error: Content is protected !!