Select Page

Advertisement

ಯತ್ನಾಳ್ ವಿರುದ್ಧ ಎಫ್ಐಆರ್ ದಾಖಲು

ಯತ್ನಾಳ್ ವಿರುದ್ಧ ಎಫ್ಐಆರ್ ದಾಖಲು

ಬೆಂಗಳೂರು : ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ‌ ನೀಡಿದ್ದ ಆರೋಪದ‌ ಮೇಲೆ‌ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್. ಮೋಹನ್ ನೀಡಿರುವ ದೂರು ಆಧರಿಸಿ‌ ಯತ್ನಾಳ್ ಮೇಲೆ‌ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.‌ ರಾಹುಲ್‌ ಗಾಂಧಿ ಹಾಗೂ ಧರ್ಮಗಳ‌ ಕುರಿತು ನೀಡಿರುವ ಅವಹೇಳನಕಾರಿ ಹೇಳಿಕೆ ಜನರ ಭಾವನೆಗೆ ದುಃಖ ಉಂಟುಮಾಡಿದೆ ಎಂದು ಆರೋಪಿಸಲಾಗಿದೆ.

ಕಾನೂನು ಸುವ್ಯವಸ್ಥೆಗೆ ವಿರುದ್ಧವಾದ ಹೇಳಿಕೆ ಇದಾಗಿದ್ದು, ಕಾಂಗ್ರೆಸ್ ಕಾರ್ಯಕರ್ತರಿಗೆ ಇದು ನೋವು ತರಿಸಿದೆ. ಈ ಕೂಡಲೇ ಕ್ರಮ ಕೈಗೊಳ್ಳಬೇಕೆಂದು ದೂರಿನಲ್ಲಿ ಉಲ್ಲೇಖ ಮಾಡಲಾಗಿದೆ.

Advertisement

Leave a reply

Your email address will not be published. Required fields are marked *

error: Content is protected !!