ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಪ್ತನ ಮೇಲೆ ಮಾರಣಾಂತಿಕ ಹಲ್ಲೆ
ಬೆಳಗಾವಿ : ಸಮುದಾಯ ಭವನಕ್ಕೆ ಕೊಟ್ಟ ಜಾಗದ ಕಾರಣಕ್ಕೆ
ಬಸ್ತವಾಡ ಗ್ರಾ.ಪಂ ಉಪಾಧ್ಯಕ್ಷ ಹಾಗೂ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಪ್ತ ವಿಠ್ಠಲ್ ಸಾಂಬ್ರೇಕರ್ ಸೇರಿದಂತೆ ನಾಲ್ವರ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆದ ಘಟನೆ ನಡೆದಿದೆ.
ತಾಲೂಕಿನ ಕೊಂಡಸ್ಕೊಪ್ಪ ಗ್ರಾಮದಲ್ಲಿ ಗುರುವಾರ ಹಲ್ಲೆ ಘಟನೆ ನಡೆದಿದ್ದು ಗಂಭೀರವಾಗಿ ಗಾಯಗೊಂಡಿರುವ ವಿಠ್ಠಲ ಸಾಂಬ್ರೇಕರ್ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಲ್ಲೆ ನಡೆಸಿರುವ ಸಂಪೂರ್ಣ ಘಟನಾವಳಿಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ.
ಕೊಂಡಸ್ಕೊಪ್ಪ ಗ್ರಾಮದ ಸಮುದಾಯ ಭವನಕ್ಕೆ ಸಾಂಬ್ರೇಕರ್ ಕುಟುಂಬದಿಂದ ಜಾಗ ನೀಡಲಾಗಿತ್ತು. ಇದಕ್ಕೆ ಪ್ರತಿಯಾಗಿ ಗ್ರಾಮದ ಜನರ ಸಹಮತದ ಮೇರೆಗೆ ಪಂಚಾಯಿತಿ ಜಾಗ ಪಡೆದಿದ್ದಕ್ಕೆ ಕೆಲವರು ವಿರೋಧ ವ್ಯಕ್ತಪಡಿಸಿದ್ದರು. ಇದೇ ಕಾರಣಕ್ಕೆ ಕಿಡಿಗೇಡಿಗಳಿಂದ ವಿಠ್ಠಲ ಮನೆಗೆ ಬಂದು ಹಲ್ಲೆ ಮಾಡಿದ್ದಾರೆ.
ಕಟ್ಟಡ ನಿರ್ಮಾಣ ಮಾಡುವಾಗಲೇ ಇಟ್ಟಿಗೆಯಿಂದ ಇದೇ ಗ್ರಾಮದ ಪುಂಡಲೀಕ ಕುಡಚೇಕರ್, ಭೀಮಾ ದೇಮನ್ನವರ, ನಾಗಪ್ಪ ವಾಳಕೆ ಎಂಬುವರಿಂದ ಹಲ್ಲೆ ಮಾಡಿದ್ದಾರೆ ಎಂದು ಪ್ರಕರಣ ದಾಖಲಾಗಿದೆ.ಹಿರೇಬಾಗೆವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಸ್ಥಳಕ್ಕೆ ಅಧಿಕಾರಿಗಳು ಭೇಟಿನೀಡಿ ಪರಿಶೀಲನೆ ನಡೆಸಿದ್ದಾರೆ.


