ಲ್ಯಾಪ್ರೋಸ್ಕೋಪಿ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದ ಯುವತಿಸಾವು : ವೈದ್ಯರ ನಿರ್ಲಕ್ಷ ಆರೋಪ
ಕೋಲಾರ : ಲ್ಯಾಪ್ರೋಸ್ಕೋಪಿ ಕಿಡ್ನಿ ಸ್ಟೋನ್ ಶಸ್ತ್ರಚಿಕಿತ್ಸೆಗೆ ದಾಖಲಾಗಿದ್ದ ಯುವತಿಯೊಬ್ಬಳು ಮೃತಪಟ್ಟಿರುವ ಘಟನೆಯು ಕೋಲಾರ ನಗರದ ಶ್ರೇಯ ಆಸ್ಪತ್ರೆಯಲ್ಲಿ ನಡೆದಿದೆ.
ಮಾಲೂರು ತಾಲೂಕಿನ ನಂಬಿಗಾನಹಳ್ಳಿ ಗ್ರಾಮದ ದೀಪ್ತಿ (22) ಮೃತಪಟ್ಟ ಯುವತಿ. ಕಿಡ್ನಿ ಸ್ಟೋನ್ ಕಾರಣ ಬುಧವಾರ ಲ್ಯಾಪ್ರೋಸ್ಕೋಪಿ ಶಸ್ತ್ರಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಅದರಂತೆ ಗುರುವಾರ ಶಸ್ತ್ರ ಚಿಕಿತ್ಸೆ ಮಾಡಲಾಗಿತ್ತು ಆದರೆ,
ಶಸ್ತ್ರಚಿಕಿತ್ಸೆ ಆದ ಕೆಲ ಸಮಯದ ಬಳಿಕ ಯುವತಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆಂದು ವೈದ್ಯರು ಪೋಷಕರಿಗೆ ತಿಳಿಸಿದ್ದಾರೆ.
ಇತ್ತ ಮೃತಳ ಪೋಷಕರು ಮಾತ್ರ, ಅನಸ್ತೇಶಿಯಾ ಡೋಸ್ ಹೆಚ್ಚಾಗಿ ಯುವತಿ ಮೃತಪಟ್ಟಿದ್ದಾಳೆಂದು ಆರೋಪಿಸಿ
ಆಸ್ಪತ್ರೆಯ ವೈದ್ಯರ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
ಇನ್ನು ಆಸ್ಪತ್ರೆ ಎದುರು ಜನ ಜಮಾಯಿಸುತ್ತಿದ್ದಂತೆ ಸ್ಥಳಕ್ಕೆ ನಗರಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


