ಬೆಂಗಳೂರು : ಚುನಾವಣಾ ಬಾಂಡ್ ಮೂಲಕ‌ ಹಣ ಸುಲಿಗೆ ಮಾಡಿರುವ ಆರೋಪದ ಸಂಬಂಧ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ FIR ದಾಖಲಿಸಲು‌ ಬೆಂಗಳೂರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ.

ಬೆಂಗಳೂರಿನ ‌ತಿಲಕ್ ನಗರದ ಪೊಲೀಸರಿಗೆ ಕೋರ್ಟ್ ಆದೇಶ ನೀಡಿದೆ. ಸಿಎಂ ಸಿದ್ದರಾಮಯ್ಯ ವಿರುದ್ಧ ‌ನೀಡಿರುವ ರೀತಿಯಲ್ಲೇ ಕೋರ್ಟ್ ಕೇಂದ್ರ ಹಣಕಾಸು ಸಚಿವೆ ‌ನಿರ್ಮಲಾ‌ ಸೀತಾರಾಮನ್ ವಿರುದ್ಧ ತನಿಖೆಗೆ ಆದೇಶ ನೀಡಿದೆ.

ಚುನಾವಣಾ ಬಾಂಡ್ ಗಳ‌ ಮೂಲಕ ಬೆದರಿಸಿ ಹಣ ಸುಲಿಗೆ ಮಾಡಲಾಗಿದೆ. ಇದೇ ಕಾರಣಕ್ಕೆ ನಿರ್ಮಲಾ‌ ಸೀತಾರಾಮನ್ ವಿರುದ್ಧ ಎಫ್ಐಆರ್ ದಾಖಲಿಸಬೇಕು ಎಂದು ಆರೋಪಿಸಿ ಜನಾಧಿಕಾರ ಸಂಘರ್ಷ ಪರಿಷತ್ ಆದರ್ಶ ಅಯ್ಯರ್ ಎಂಬುವವರು ಕೋರ್ಟ್ ನಲ್ಲಿ ದೂರು ದಾಖಲಿಸಿದ್ದರು.

ಈ ಕುರಿತು ವಿಚಾರಣೆ ಮಾಡಿರುವ ಕೋರ್ಟ್ ನಿರ್ಮಲಾ ಸೀತಾರಾಮನ್ ವಿರುದ್ಧ FIR ದಾಖಲು ಮಾಡುವಂತೆ ತಿಲಕ ನಗರ ಪೊಲೀಸರರುಗೆ ಸೂಚನೆ ನೀಡಿದೆ. ಜೊತೆಗೆ ಮುಂದಿನ ವಿಚಾರಣೆಯನ್ನು ಅ.10 ಕ್ಕೆ ಕೋರ್ಟ್ ಮುಂದೂಡಿದೆ.