ಚಿಕ್ಕೋಡಿ : ಇಬ್ಬರು ಮಕ್ಕಳ ಜೊತೆ ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ
ರಾಯಬಾಗ : ಕೌಟುಂಬಿಕ ಕಲಹಕ್ಕೆ ತಾಯಿ ಹಾಗೂ ಇಬ್ಬರು ಮಕ್ಕಳು ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಯಬಾಗ ತಾಲೂಕಿನ ಬೊಮ್ಮನಾಳ ಗ್ರಾಮದಲ್ಲಿ ನಡೆದಿದೆ.
ಯಲ್ಲವ್ವ ಕರಿಹೊಳೆ ( 30 ), ಸಾತ್ವಿಕ್ ( 05 ) ಮುತ್ತಪ್ಪ ( 01 ) ಮೃತಪಟ್ಟ ದುರ್ದೈವಿಗಳು, ಭಾನುವಾರ ಬೆಳಿಗ್ಗೆ ಘಟನೆ ಬೆಳಕಿಗೆ ಬಂದಿದ್ದು ಮಕ್ಕಳ ಜೊತೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಘಟನೆಗೆ ಕೌಟುಂಬಿಕ ಕಲಹ ಕಾರಣ ಎಂದು ಹೇಳುತ್ತಿದ್ದರು, ಈ ಕುರಿತು ಪೊಲೀಸ್ ತನಿಖೆಯಿಂದ ಹೆಚ್ಚಿನ ಮಾಹಿತಿ ತಿಳಿಯಬೇಕು. ರಾಯಬಾಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


