ಬೆಂಗಳೂರು : ವಿವಾದಾತ್ಮಕ ದತ್ತಪೀಠದ ಪೂಜೆ ಮಾಡಲು ಈ ಹಿಂದೆ ಮುಜಾವರ್ ನೇಮಿಸಿದ್ದ ಆದೇಶವನ್ನು ರದ್ದುಪಡಿಸಿ ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದ್ದು ಹೊಸದಾಗಿ ವಾದ, ವಿವಾದ ಪರಿಗಣಿಸಿ ಕಾನೂನು ಪ್ರಕಾರ ಕ್ರಮ ಕೈಗೊಳ್ಳುವಂತೆ ಆದೇಶ ನೀಡಿದೆ.

2018 ರ ಮಾರ್ಚ್ ತಿಂಗಳಲ್ಲಿ ದಾರ್ಮಿಕ ದತ್ತಿ ಇಲಾಖೆ ಆಯುಕ್ತರು ಮೌಲ್ವಿ ಸೈಯದ್ ಗೌಸ್ ಮೊಹಿದ್ದೀನ್ ಅವರನ್ನು ನೇಮಿಸಿ ಆದೇಶ ಹೊರಡಿಸಿದ್ದರು. ಈ ಆದೇಶವನ್ನು ಪ್ರಶ್ನಿಸಿ ಗುರು ದತ್ತಾತ್ರೇಯ ಪೀಠ ದೇವಸ್ಥಾನ ಸಂವರ್ದನಾ ಸಮೀತಿ 2018 ರ ಎಪ್ರಿಲ್  ನಲ್ಲಿ ಅರ್ಜಿ ಸಲ್ಲಿಸಿತ್ತು.

ಈ ಕುರಿತು ರಾಜ್ಯ ಸರ್ಕಾರ ಅರ್ಜಿ ವಿಚಾರಣೆ ಹಂತದಲ್ಲಿ ಇರುವುದರಿಂದ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ ಎಂದು ಕೋರ್ಟ್ ಗೆ ತಿಳಿಸಿತ್ತು. ದತ್ತಪೀಠದ ಪೂಜಾ ವಿಧಿ ವಿಧಾನಗ ಕುರಿತು ಯಾವುದೇ ‌ಆತುರದ ನಿರ್ಧಾರ ಬೇಡ ಎಂದು ಹೈಕೋರ್ಟ್ ರಾಜ್ಯ ಸಕರ್ಸರಕ್ಕೆ ಮಧ್ಯಂತರ ಆದೇಶ ಹೊರಡಿಸಿತ್ತು.

ವಾದ-ಪ್ರತಿವಾದ ಆಲಿಸಿದ್ದ ಹೈಕೋರ್ಟ್ ಇಂದಿಗೆ ತೀರ್ಪನ್ನ ಕಾಯ್ದಿರಿಸಿತ್ತು. ಪ್ರಕರಣವನ್ನು ಹೊಸದಾಗಿ ಪರಿಗಣಿಸಿ, ಕಾನೂನಿನ ಪ್ರಕಾರ ಸೂಕ್ತ ನಿರ್ಧಾರ ಕೈಗೊಳ್ಳಿ ಎಂದು ನ್ಯಾಯಮೂರ್ತಿ ಪಿ.ಎಸ್‌. ದಿನೇಶ್ ಕುಮಾರ್ ನೇತೃತ್ವದ ಪೀಠ ಆದೇಶ ಹೊರಡಿಸಿದೆ.