ಕತ್ತಿ ಸಾಹುಕಾರ್ ರಾಜೀನಾಮೆ ಪತ್ರದಲ್ಲಿ ಏನಿದೆ…?
ಬೆಳಗಾವಿ : ಬೆಳಗಾವಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ದಿಢೀರ್ ರಾಜೀನಾಮೆ ಸಲ್ಲಿಸಿ ಅಚ್ಚರಿ ಮೂಡಿಸಿರುವ ಮಾಜಿ ಸಂಸದ ರಮೇಶ್ ಕತ್ತಿ ರಾಜೀನಾಮೆ ಪತ್ರದಲ್ಲಿ ಏನಿಗೆ ಎಂಬ ಕುತೂಹಲ ಎಲ್ಲರಿಗೂ ಇರಬಹುದು.
ಮಾನ್ಯರೆ : ಈ ಕೆಳಗೆ ಸಹಿ ಮಾಡಿರುವ ನಾನು ರಮೇಶ್ ವಿಶ್ವನಾಥ ಕತ್ತಿ. ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನನ್ನ ಸ್ವ ಇಚ್ಛೆಯಿಂದ ರಾಜೀನಾಮೆ ಸಲ್ಲಿಸುತ್ತಿದ್ದೇನೆ. ಕಾರಣ ನನ್ನ ರಾಜೀನಾಮೆಯನ್ನು ಅಂಗೀಕರಿಸಲು ಈ ಮೂಲಕ ವಿನಂತಿಸುತ್ತೇನೆ.
ನನ್ನ ಅವಧಿಯಲ್ಲಿ ನನಗೆ ಸಹಕಾರ ನೀಡಿದ ಬ್ಯಾಂಕಿನ ಎಲ್ಲಾ ಆಡಳಿತ ಮಂಡಳಿ ಸದಸ್ಯರಿಗೆ ತುಂಬು ಹೃದಯದ ಧನ್ಯವಾದಗಳು ಎಂದು ಉಲ್ಲೇಖ ಮಾಡುವ ಮೂಲಕ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ.
ಕಳೆದ 41 ವರ್ಷಗಳಿಂದ ಬೆಳಗಾವಿ ಡಿಸಿಸಿ ಬ್ಯಾಂಕ್ ನಿರ್ದೇಶಕರಾಗಿರುವ ರಮೇಶ್ ಕತ್ತಿ, 6 ಬಾರಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಇವರಿಗೆ ಟಿಕೆಟ್ ನಿರಾಕರಣೆ ಮಾಡಲಾಗಿತ್ತು.



