ಬೀದರ್ : ಬೈಕ್ ಹಾಗೂ ಸಾರಿಗೆ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿರುವ ಘಟನೆ ಬೀದರ್ – ತೆಲಂಗಾಣ ಗಡಿಯ ದೇವವನ ಪಾರ್ಕ್ ಬಳಿ ಈ ಘಟನೆ ನಡೆದಿದೆ.

ಮೃತರನ್ನು ತೆಲಂಗಾಣ ಸಂಗಾರೆಡ್ಡಿ ಜಿಲ್ಲೆಯ ಗಣೇಶಪುರ ಗ್ರಾಮದ ರೇಣುಕಾ(33), ಜಗನ್ನಾಥ್‌ (38), ವಿನೋದ್ (15) ಹಾಗೂ ಸಿದ್ರಾಮ್ (72) ಎಂದು ಗುರುತಿಸಲಾಗಿದೆ.

ಜಮೀನಿನಲ್ಲಿ ಕೆಲಸ ಮುಗಿಸಿ ಒಂದೇ ಬೈಕ್ ನಲ್ಲಿ ನಾಲ್ವರು ತೆರಳುತ್ತಿದ್ದ ವೇಳೆ ಹೈದ್ರಾಬಾದ್‌ನಿಂದ ಬೀದರ್ ಕಡೆಗೆ ಬರುತ್ತಿದ್ದ ಕಲ್ಯಾಣ ಕರ್ನಾಟಕ ಸಾರಿಗೆ ಬಸ್ ಡಿಕ್ಕಿ ಹೊಡೆದು ಈ ದುರಂತ ಸಂಭವಿಸಿದೆ.

ಅಪಘಾತದ ಬಳಿಕ ಬಸ್‌ ಬಿಟ್ಟು ಚಾಲಕ ಹಾಗೂ ನಿರ್ವಾಹಕ ಪರಾರಿಯಾಗಿದ್ದಾರೆ. ಮೃತರ ಶವವನ್ನು ಬೀದರ್‌ನ ಬೀಮ್ಸ್ ಆಸ್ಪತ್ರೆಯ ಶವಗಾರಕ್ಕೆ ರವಾನೆ ಮಾಡಲಾಗಿದೆ