Select Page

Advertisement

ಬೆಳಗಾವಿ ಅಧಿವೇಶನ ವೇಳೆಗೆ ಹೊಸ ಸಿಎಂ ; ಮಹತ್ವದ ಸುಳಿವು ಕೊಟ್ಟ ವಿಜಯೇಂದ್ರ

ಬೆಳಗಾವಿ ಅಧಿವೇಶನ ವೇಳೆಗೆ ಹೊಸ ಸಿಎಂ ; ಮಹತ್ವದ ಸುಳಿವು ಕೊಟ್ಟ ವಿಜಯೇಂದ್ರ

ಬೆಳಗಾವಿ : ಈ ಬಾರಿ ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲ ಅಧಿವೇಶನಕ್ಕೆ ಹೊಸ ಸಿಎಂ ಬರುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೊಸ ಬಾಂಬ್ ಸಿಡಿಸಿದ್ದಾರೆ.

ರಾಜ್ಯದಲ್ಲಿ ಸಿಎಂ ಬದಲಾವಣೆ ವಿಷಯ ಚರ್ಚೆಯಲ್ಲಿರುವ ಸಂದರ್ಭದಲ್ಲಿ ಬರುವ ಬೆಳಗಾವಿ ಚಳಿಗಾಲದ ಅಧಿವೇಶನ ಅನ್ನುವಷ್ಟರಲ್ಲಿ ಹೊಸ ಸಿಎಂ ಬರುತ್ತಾರೆ ಎಂದು ವಿಜಯೇಂದ್ರ ಹೇಳಿದ್ದಾರೆ. ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ರಾಜೀನಾಮೆ ನೀಡುತ್ತಾರಾ ಎಂಬ ಪ್ರಶ್ನೆ ಸಧ್ಯ ಬಲವಾಗಿ ಮೂಡಿದೆ.

ಕೋವಿಡ್ ಸಂದರ್ಭದಲ್ಲಿ ಬಿಜೆಪಿ ಅಧಿಕಾರ ಅವಧಿಯಲ್ಲಿ ನಡೆದ ಹಗರಣದ ತನಿಖೆಗೆ ಎಸ್ಐಟಿ ರಚನೆ ಕುರಿತು ಪ್ರತಿಕ್ರಿಯೆ ನೀಡಿ, ಮುಖ್ಯಮಂತ್ರಿಗಳಿಗೆ ಏನು ಮಾಡಬೇಕು ಎಂಬುದು ತಿಳಿಯುತ್ತಿಲ್ಲ. ಸರ್ಕಾರಿ ನೌಕರರು ಪ್ರತಿಭಟನೆ ಮಾಡುತ್ತಿದ್ದು ಅವರ ಸಮಸ್ಯೆ ಆಲಿಸದ ಸಚಿವರು ನನ್ನ ವಿರುದ್ಧ ಗಂಟೆಗಂಟಲೇ ಮಾತನಾಡುತ್ತಾರೆ ಎಂದರು.

ಈ‌ ಸಂದರ್ಭದಲ್ಲಿ ಸಂಸದ ಈರಣ್ಣ ಕಡಾಡಿ, ಶಾಸಕ ಬಾಲಚಂದ್ರ ಜಾರಕಿಹೊಳಿ ಸೇರಿದಂತೆ ಬಿಜೆಪಿ ನಾಯಕರು ಉಪಸ್ಥಿತರಿದ್ದರು.

Advertisement

Leave a reply

Your email address will not be published. Required fields are marked *

error: Content is protected !!