ಚಿಕ್ಕೋಡಿ : ಭೀಕರ ರಸ್ತೆ ಅಪಘಾತ ; ಬೈಕ್ ಸವಾರ ಸಾವು
ಚಿಕ್ಕೋಡಿ : ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.
ಚಿಕ್ಕೋಡಿ ತಾಲೂಕಿನ ಹತ್ತರವಾಟ ಗ್ರಾಮದ ಹೊರವಲಯ ದಲ್ಲಿ ಬೈಕ್ ಹಾಗೂ ಲಾರಿ ಮಧ್ಯೆ ಅಪಘಾತ ಸಂಭವಿಸಿದ್ದು ಬೈಕ್ ಸವಾರ ಸ್ಥಳದಲ್ಲೇ ಬಿದ್ದು ಸಾವಣಪ್ಪಿದ್ದಾನೆ.
ಮೃತಪಟ್ಟ ಬೈಕ್ ಸವಾರ ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆಯ ಹಲ್ಲಕರ್ಣಿ ಗ್ರಾಮದ ನಿವಾಸಿ ಎಂಬುದು ತಿಳಿದುಬಂದಿದೆ. ಸ್ಥಳಕ್ಕೆ ಚಿಕ್ಕೋಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


