Select Page

Advertisement

ಪತ್ನಿ ಹೆಸರಲ್ಲಿ ಪೂಜೆ ಸಲ್ಲಿಸಿ ಸ್ವತಃ ಕುಂಕುಮ ಇಟ್ಕೊಂಡ ಸಿಎಂ

ಪತ್ನಿ ಹೆಸರಲ್ಲಿ ಪೂಜೆ ಸಲ್ಲಿಸಿ ಸ್ವತಃ ಕುಂಕುಮ ಇಟ್ಕೊಂಡ ಸಿಎಂ

ಸವದತ್ತಿ : ಹಲವು ಅಭಿವೃದ್ಧಿ ಕಾಮಗಾರಿ ಉದ್ಘಾಟನೆ ಹಾಗೂ ರೇಣುಕಾ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ ಸಭೆ ಹಿನ್ನಲೆಯಲ್ಲಿ ಸಿಎಂ ಸಿದ್ದರಾಮಯ್ಯ ಯಲ್ಲಮ್ಮ ದೇವಿ ದರ್ಶನ ಪಡೆದುಕೊಂಡು ಪತ್ನಿ ಪಾರ್ವತಿ ಹೆಸರಿನಲ್ಲಿ ಪೂಜೆ ಸಲ್ಲಿಸಿದರು.

ಮುಡಾ ಪ್ರಕರಣಕ್ಕೆ ಸಿಲುಕಿದ ನಂತರದಲ್ಲಿ ಸಿಎಂ ರಾಜ್ಯದ ವಿವಿಧ ದೇವಸ್ಥಾನಗಳಿಗೆ ಭೇಟಿ ನೀಡುತ್ತಿದ್ದು ಭಾನುವಾರ ಸವದತ್ತಿ ಯಲ್ಲಮ್ಮ ದೇವಸ್ಥಾನದಲ್ಲಿ ಪತ್ನಿ ಪಾರ್ವತಿ ಹೆಸರಿನಲ್ಲಿ ಪೂಜೆ ನೆರವೇರಿಸಿದರು. ನಂತರ ಸ್ವತಃ ಅವರೇ ಕುಂಕುಮ ಇಟ್ಟುಕೊಂಡರು.

ಭಾನುವಾರ ಮಧ್ಯಾಹ್ನ ಸವದತ್ತಿ ಯಲ್ಲಮ್ಮ ಕ್ಷೇತ್ರಕ್ಕೆ ಆಗಮಿಸಿ ಸಿಎಂ ಸಿದ್ದರಾಮಯ್ಯ ಅವರನ್ನು ಮಂತ್ರಘೋಷಗಳ ಮೂಲಕ ದೇವಿ ಸನ್ನಿಧಿಗೆ ಸ್ವಾಗತಿಸಲಾಯಿತು. ನಂತರ ಪುರೋಹಿತರು ಸಿಎಂ ಸಿದ್ದರಾಮಯ್ಯ ಹಾಗೂ ಅವರ ಪತ್ನಿ ಪಾರ್ವತಿ ಹೆಸರಿನಲ್ಲಿ ಅರ್ಚನೆ ಮಾಡಿದರು.

ಈ ಸಂದರ್ಭದಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್, ಉಸ್ತುವಾರಿ ಸಚಿವ ಸತೀಶ್ ಜಸರಕಿಹೊಳಿ, ಲಕ್ಷ್ಮೀ ಹೆಬ್ಬಾಳಕರ್, ಎಚ್.ಕೆ ಪಾಟೀಲ್, ರಾಮಲಿಂಗಾರೆಡ್ಡಿ ಸೇರಿದಂತೆ ಅನೇಕರು ಸಿಎಂ ಅವರಿಗೆ ಸಾಥ್ ನೀಡಿದರು.

Advertisement

Leave a reply

Your email address will not be published. Required fields are marked *

error: Content is protected !!