ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಆಸ್ಪತ್ರೆಗೆ ದಾಖಲು
ಮುಂಬೈ : ಶಿವಸೇನೆ ಮುಖ್ಯಸ್ಥ ಹಾಗೂ ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಸೋಮವಾರ ಬೆಳಿಗ್ಗೆ ಆಂಜಿಯೋಪ್ಲ್ಯಾಸ್ಟಿ ಚಿಕಿತ್ಸೆಗಾಗಿ ಮುಂಬೈನ ರಿಲಯನ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸದ್ಯ ಅವರ ಆರೋಗ್ಯ ತಪಾಸಣೆ ನಡೆಸಲಾಗುತ್ತಿದೆ.
ಹೃದಯ ಸಂಬಂಧಿಸಿದ ಕಾಯಿಲೆಗೆ ಆಂಜಿಯೋಪ್ಲ್ಯಾಸ್ಟಿ ಚಿಕಿತ್ಸೆ ನೀಡಲಾಗುತ್ತದೆ. ಕಳೆದ ಎರಡು ವರ್ಷಗಳ ಹಿಂದೆಯೂ ಉದ್ಧವ್ ಠಾಕ್ರೆ ಈ ಚಿಕಿತ್ಸೆಗೆ ಒಳಗಾಗಿದ್ದರು. ಸಧ್ಯ ಅವರಿಗೆ ಯಾವುದೇ ಸಮಸ್ಯೆ ಇಲ್ಲ ಎಂದು ವೈದ್ಯರು ತಿಳಿಸಿದ್ದಾರೆ.
ತಂದೆಯ ಆರೋಗ್ಯದ ಕುರಿತು ಪುತ್ರ ಆದಿತ್ಯ ಠಾಕ್ರೆ ಮಾಹಿತಿ ನೀಡಿದ್ದು. ಈ ಭೇಟಿ ಪೂರ್ವ ಯೋಜಿತವಾಗಿತ್ತು. ಮಾಮೂಲಿ ತಪಾಸಣೆ ನಡೆದಿದೆ. ಅವರು ಆರೋಗ್ಯವಾಗಿದ್ದಾರೆ ಎಂದು ಹೇಳಿದ್ದಾರೆ.
ಇಂದು ಬೆಳಿಗ್ಗೆ, ಉದ್ಧವ್ ಠಾಕ್ರೆ ಅವರನ್ನು ಸರ್ ಎಚ್ಎನ್ ರಿಲಯನ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ನಿಮ್ಮ ಶುಭಾಶಯಗಳೊಂದಿಗೆ, ಎಲ್ಲವೂ ಚೆನ್ನಾಗಿದೆ, ಮತ್ತು ಅವರು ಕೆಲಸ ಮಾಡಲು ಮತ್ತು ಜನರಿಗೆ ಸೇವೆ ಸಲ್ಲಿಸಲು ಸಂಪೂರ್ಣವಾಗಿ ಸಿದ್ಧರಾಗಿದ್ದಾರೆ ಎಂದಿದ್ದಾರೆ.


