Select Page

Advertisement

RAIN UPDATE : ಮಳೆ ಅವಾಂತರ ; ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

RAIN UPDATE : ಮಳೆ ಅವಾಂತರ ; ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಬೆಂಗಳೂರು : ರಾಜ್ಯಾದ್ಯಂತ ಮಳೆ ಅವಾಂತರ ಮುಂದುವರಿದ ಪರಿಣಾಮ ಜನಸಾಮಾನ್ಯರು ಅಕ್ಷರಶಃ ನಲುಗಿ ಹೋಗಿದ್ದಾರೆ. ಎಲ್ಲೆಂದರಲ್ಲಿ ಮಳೆ ನೀರು ತುಂಬಿಕೊಂಡಿದ್ದು ಅಪಾರ್ಟ್‌ಮೆಂಟ್ ಗಳಿಗೂ ನೀರು ನುಗ್ಗಿದೆ.

ನಿರಂತರ ಮಳೆಯಿಂದ ಕಂಗಾಲಾಗಿರುವ ಬೆಂಗಳೂರು ನಿವಾಸಿಗಳಿಗೆ ಸಂಕಷ್ಟ ಎದುರಾಗಿದೆ. ಸಧ್ಯ ಬೆಂಗಳೂರಿನ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಬುಧವಾರವೂ ಮಂಡ್ಯ, ಮೈಸೂರು, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ಕರಾವಳಿ ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಕಳೆದ ಎರಡು ದಿನಗಳಿಂದ ನಿರಂತರವಾಗಿ ಸುರಿದ ಮಳೆಯಿಂದ ಬೆಂಗಳೂರಿನ ಯಲಹಂಕಾ ಕೇಂದ್ರಿಯ ವಿಹಾರ ಅಪಾರ್ಟ್‌ಮೆಂಟ್ ಬಳಿ ನೀರು ನುಗಿದ್ದು ಒಳಗೆ ಸಿಲಿಕಿದ್ದ ಜನರನ್ನು ಟ್ರ್ಯಾಕ್ಟರ್ ಸಹಾಯದಿಂದ ಸ್ಥಳಾಂತರ ಮಾಡಲಾಗಿದೆ.

Advertisement

Leave a reply

Your email address will not be published. Required fields are marked *

error: Content is protected !!