Select Page

Advertisement

ಕುಮಾರಸ್ವಾಮಿಗೆ ಕರಿಯ ಎಂದಿದ್ದ ಸಚಿವ ಜಮೀರ್ ವಿರುದ್ಧ ಪ್ರಕರಣ ದಾಖಲು

ಕುಮಾರಸ್ವಾಮಿಗೆ ಕರಿಯ ಎಂದಿದ್ದ ಸಚಿವ ಜಮೀರ್ ವಿರುದ್ಧ ಪ್ರಕರಣ ದಾಖಲು

ಬೆಂಗಳೂರು : ಕೇಂದ್ರ ಸಚಿವ ಹಾಗೂ ಮಾಜಿ ಸಿಎಂ ಕುಮಾರಸ್ವಾಮಿ ಗೆ ಕರಿಯ ಎಂದು ಅವಹೇಳನ ಮಾಡಿದ್ದ ಸಚಿವ ಜಮೀರ್ ಅಹಮ್ಮದ್ ಖಾನ್ ವಿರುದ್ಧ ಪ್ರಕರಣ ದಾಖಲಾಗಿದೆ.

ಚನ್ನಪಟ್ಟಣ ಉಪ ಚುನಾವಣೆ ಪ್ರಚಾರ ಸಂದರ್ಭದಲ್ಲಿ ಭಾಷಣ ಮಾಡುತ್ತಿದ್ದ ಸಚಿವ ಜಮೀರ್ ಅಹಮ್ಮದ್ ಕುಮಾರಸ್ವಾಮಿ ಬಗ್ಗೆ ಮಾತನಾಡುತ್ತಾ, ಕರಿಯ ಕುಮಾರಸ್ವಾಮಿ ಎಂದು ಅವಹೇಳನಕಾರಿ ಹೇಳಿಕೆ ನೀಡಿದ್ದು ಎಲ್ಲೆಡೆ ಆಕ್ರೋಶಕ್ಕೆ ಕಾರಣವಾಗಿತ್ತು.

ಕರಿಯ ಎಂಬ ಪದ ಬಳಕೆ ಮಾಡಿರುವ ಅಚಿವ ಜಮೀರ್ ವರ್ಣಭೇದ ಪ್ರದರ್ಶನ ಮಾಡಿದ್ದಾರೆ. ಇದು ಕಾನೂನಿನ ಪ್ರಕಾರ ತಪ್ಪಾಗಿದ್ದು, ಸೂಕ್ತ ಕ್ರಮಕ್ಕೆ ಆಗ್ರಹಿಸಿ ವಕೀಲ ಮಹೇಶ್ ಎಂಬುವವರು ಹೊಸಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಇನ್ನೂ ತಮ್ಮ ಮಾತಿನಿಂದ ವಿವಾದ ಹೆಚ್ಚಾಗುತ್ರಿದ್ದಂತೆ ಸಚಿವ ಜಮೀರ್ ಜನರಲ್ಲಿ ಕ್ಷಮೆ ಕೇಳಿದ್ದಾರೆ. ಜೊತೆಗೆ ದೇವೆಗೌಡ ಮನೆತನ ಖರೀದಿ ಮಾಡುತ್ತೇನೆ ಎಂದು ಹೇಳಿದ್ದ ಅವರು ಸಧ್ಯ ಉಲ್ಟಾ ಹೊಡೆದಿದ್ದಾರೆ.

Advertisement

Leave a reply

Your email address will not be published. Required fields are marked *

error: Content is protected !!