Select Page

Advertisement

ಬೆಳಗಾವಿಯಲ್ಲಿ ಚಳಿಗಾಲ ಅಧಿವೇಶನ ನಡೆಯುವುದು ಅನುಮಾನ…?

ಬೆಳಗಾವಿಯಲ್ಲಿ ಚಳಿಗಾಲ ಅಧಿವೇಶನ ನಡೆಯುವುದು ಅನುಮಾನ…?

ಬೆಳಗಾವಿ : ಈ ಬಾರಿ ಬೆಳಗಾವಿಯಲ್ಲಿ ಚಳಿಗಾಲ ಅಧಿವೇಶನ ನಡೆಯುವುದು ಅನುಮಾನ ಎಂಬ ಮಾತು ಕೇಳಿಬರುತ್ತಿದೆ. ಹಾಗೆಯೇ ಈ ಕುರಿತು ಸರ್ಕಾರವೂ ತನ್ನ ನಿರ್ಧಾರ ಪ್ರಕಟಿಸಿಲ್ಲ.

ಗುರುವಾರ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ ಅಧಿವೇಶನ ಕುರಿತು ಯಾವುದೇ ಚರ್ಚೆ ನಡೆದಿಲ್ಲ ಎಂಬುದು ತಿಳಿದಿಬಂದಿದೆ. ಇದರಿಂದ ಅಧಿವೇಶನ ನಡೆಯುವ ಕುರಿತು ಅನುಮಾನ ಮೂಡಿದೆ.

ಕಳೆದ ಹದಿನೈದು ದಿನಗಳ ಹಿಂದೆ ಸ್ಪೀಕರ್ ಖಾದರ್ ಹಾಗೂ ಸಭಾಪತಿ ಬಸವರಾಜ ಹೊರಟ್ಟಿ ಬೆಳಗಾವಿ ಸುವರ್ಣಸೌಧಕ್ಕೆ ಭೇಟಿನೀಡಿ ತಯಾರಿ ಕುರಿತು ಪರಿಶೀಲನೆ ನಡೆಸಿದ್ದರು.‌

ದಿನಾಂಕ ನಿಗದಿ ಕುರಿತು ಸರ್ಕಾರ ತನ್ನ ನಿರ್ಧಾರ ಪ್ರಕಟಿಸಲಿದೆ ಎಂದು ಹೇಳಿದ್ದ ಅವರ ನಂತರ ನಿನ್ನೆ ನಡೆದ ಸಚಿವಸಂಪುಟ ಸಭೆಯಲ್ಲಿ ಅಧಿವೇಶನ ಕುರಿತು ಸರ್ಕಾರ ಯಾವುದೇ ನಿರ್ಧಾರ ಕೈಗೊಳ್ಳದ ಹಿನ್ನಲೆಯಲ್ಲಿ ಅನುಮಾನ ಹುಟ್ಟುಹಾಕಿದೆ.

ಮುಡಾ ಪ್ರಕರಣ ಸೇರಿದಂತೆ ಹಲವು ಕಾರಣಗಳಿಂದ ರಾಜ್ಯ ಸರ್ಕಾರ ಇಕ್ಕಟ್ಟಿಗೆ ಸಿಲುಕಿದ್ದು ಸುಳ್ಳಲ್ಲ. ಅಧಿವೇಶನ ಸಂದರ್ಭದಲ್ಲಿ ವಿಪಕ್ಷಗಳು ಸರ್ಕಾರದ ಮೇಲೆ ಮುಗಿಬೀಳುವುದು ಸ್ಪಷ್ಟ.

Advertisement

Leave a reply

Your email address will not be published. Required fields are marked *

error: Content is protected !!