Breaking : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಪ್ತನ ಮೇಲೆ ತಲ್ವಾರ್ ನಿಂದ ಹಲ್ಲೆ
ಬೆಳಗಾವಿ : 20 ಗುಂಟೆ ಜಾಗಕ್ಕೆ ವಿವಾದ ನಡೆದಿದ್ದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಪ್ತನ ಮೇಲೆ ತಲ್ವಾರ್ ನಿಂದ 15 ಅಧಿಕ ದುಷ್ಕರ್ಮಿಗಳು ಹಲ್ಲೆ ನಡೆಸಿರುವ ಘಟನೆ ಬೆಳಕಿಗೆ ಬಂಧಿದೆ.
ಬೆಳಗಾವಿ ತಾಲೂಕಿನ ಯಳ್ಳೂರ ಬಳಿಯ ಸುಳಗಾ ಗ್ರಾಮದಲ್ಲಿ, ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಪ್ತ ಅರವಿಂದ ಪಾಟೀಲ ಸೇರಿ ನಾಲ್ವರ ಮೇಲೆ ಹಲ್ಲೆ ಮಾಡಲಾಗಿದೆ. ಗಂಭೀರವಾಗಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೆಳಗಾವಿ ತಾಲೂಕಿನ ಯಳ್ಳೂರು ಗ್ರಾಮದಲ್ಲಿರುವ 20 ಗುಂಟೆ ಜಾಗದ ವಿಚಾರವಾಗಿ ಗಲಾಟೆ ನಡೆದಿದೆ. ಮನೆ ಮುಂದೆ ಕುಳಿತಿದ್ದ ಅರವಿಂದ ಜೊತೆಗೆ ಕೆಲ ಯುವಕರಿಂದ ವಾಗ್ವಾದ ನಡೆದಿದ್ದು, ಈ ಸಂದರ್ಭದಲ್ಲಿ ಏಕಾಏಕಿ 15 ಜನರ ಗುಂಪು ಮಾರಕಾಸ್ತ್ರ ಸಮೇತ ಆಗಮಿಸಿ ಹಲ್ಲೆ ನಡೆಸಿದ್ದಾರೆ.
ಬೆಳಗಾವಿ ತಾಲೂಕಿನ ಯಳ್ಳೂರು ಗ್ರಾಮದಲ್ಲಿರುವ 20 ಗುಂಟೆ ಜಾಗದ ವಿಚಾರವಾಗಿ ಕೆಲ ದಿನಗಳ ಹಿಂದಷ್ಟೇ ಅರವಿಂದ ಪಾಟೀಲ ಪರ ಡಿಸಿ, ಎಸಿ ಕೋರ್ಟ್ ಆದೇಶ ನೀಡಿತ್ತು. ಇದಕ್ಕೆ ತಡೆ ಕೋರಿ ಇನ್ನೊಂದು ಗುಂಪು ಕೋರ್ಟ್ ಮೆಟ್ಟಿಲೇರಿತ್ತು. ಡಿಸಿ ಕೋರ್ಟ್ ಆದೇಶಕ್ಕೆ ತಡೆಯಾಜ್ಞೆ ಸಿಗದಿದ್ದಾಗ ಅರವಿಂದ ಮೇಲೆ ಹಲ್ಲೆಗೆ ಯತ್ನಿಸಲಾಗಿದೆ.
ಹಲ್ಲೆ ಯತ್ನ ನಡೆದಾಗ ಗ್ರಾಮಸ್ಥರು ಸೇರಿದ್ದಾರೆ. ಈ ಸಂದರ್ಭದಲ್ಲಿ ಆರೋಪಿಗಳಿ ಬೈಕ್ ಸ್ಥಳದಲ್ಲೇ ಬಿಟ್ಟು ಓಡಿ ಹೋಗಿದ್ದಾರೆ.ಘಟನೆ ವೇಳೆ ಇಬ್ಬರು ದುಷ್ಕರ್ಮಿಗಳಿಗೂ ಗಾಯವಾಗಿದ್ದು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಳಗಾವಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


