ವಿಜಯಪುರ : ವಿಜಯಪುರ ಜಿಲ್ಲೆ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಲಕ್ಷ್ಮಣ ನಿಂಬರಗಿ ಅಧಿಕಾರ ವಹಿಸಿಕೊಂಡರು.
ಪ್ರಭಾರಿ ಎಸ್ಪಿಯಾಗಿದ್ದ ಪುಷ್ಪಗುಚ್ಚ ನೀಡಿ ಲಕ್ಷ್ಮಣ ನಿಂಬರಗಿ ಅವರನ್ನು ಸ್ವಾಗತಿಸಿ ಅಧಿಕಾರ ಹಸ್ತಾಂತರಿಸಿದರು. ಕಳೆದ ಎರಡು ದಿನಗಳ ಹಿಂದೆ ರಾಜ್ಯ ಸರ್ಕಾರ ಏಳು ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿತ್ತು.
ಈ ವೇಳೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶಂಕರ ಮಾರಿಹಾಳ, ರಾಮನಗೌಡ ಹಟ್ಟಿ, ಡಿಎಸ್ಪಿ ಬಸವರಾಜ ಯಲಿಗಾರ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
.




