ಬೆಂಗಳೂರು : ಉಪ ಚುನಾವಣೆ ಮತ ಎಣಿಕೆ ಪ್ರಾರಂಭವಾಗಿದೆ. ಚನ್ನಪಟ್ಟಣದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ನಡುವೆ ಹಾವು – ಏಣಿ ಆಟ ಮುಂದುವರಿದಿದೆ.

ನಾಲ್ಕನೇ ಸುತ್ತಿನ ಮತ ಎಣಿಕೆಯಲ್ಲಿ‌‌ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅಲ್ಪ ಮತಗಳ ಅಂತರದಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ.

ನಿಖಿಲ್ ಕುಮಾರಸ್ವಾಮಿ – 15,307
ಸಿ. ಪಿ ಯೋಗೇಶ್ವರ್ – 14,460

ಇನ್ನು ಸಂಡೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಣ್ಣಪೂರ್ಣ ತುಕಾರಾಂ ಹಾಗೂ ಶಿಗ್ಗಾಂವಿಯಲ್ಲಿ ಭರತ್ ಬೊಮ್ಮಾಯಿ ಮುನ್ನಡೆ ಕಾಯ್ದುಕೊಂಡಿದ್ದಾರೆ. ಐದನೇ ಸುತ್ತಿನಲ್ಲಿ ಭರತ್ ಬೊಮ್ಮಾಯಿ 1,567 ಮತಗಳ ಅಂತರ ಕಾಯ್ದುಕೊಂಡಿದ್ದಾರೆ.