Select Page

Advertisement

ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ಮಾಲಿಕ ಆತ್ಮಹತ್ಯೆಗೆ ಶರಣು

ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ಮಾಲಿಕ ಆತ್ಮಹತ್ಯೆಗೆ ಶರಣು

ದಾವಣಗೆರೆ : ಸ್ಪರ್ಧಾತ್ಮಕ ಪರೀಕ್ಷೆ ತರಬೇತಿ ನೀಡುತ್ತಿದ್ದ ಕೇಂದ್ರದ ಮಾಲಿಕ ಸ್ವಗೃಹದಲ್ಲಿ ಆತ್ಮಹತ್ಯೆಗೆ ಶರಣಾದ ಘಟನೆ ದಾವಣಗೆರೆಯಲ್ಲಿ ನಡೆದಿದೆ.

ಕಾಪರ್ ಏಜ್ ಗ್ರುಪ್ ಇನ್ಸ್ಟಿಟ್ಯೂಟ್ ಮಾಲಿಕ ಶರತ್ ಜಿ.ಎನ್ (34) ಶುಕ್ರವಾರ ನೇಣಿಗೆ ಶರಣಾಗಿದ್ದಾರೆ. ಹಲವು ಕಡೆ ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರ ಪ್ರಾರಂಭಿಸಿರುವ ಇವರು ಸಂಸ್ಥೆ ನಡೆಸುತ್ತಿದ್ದಾರೆ.

ಕಳೆದ ಕೆಲ ದಿನಗಳಿಂದ ರಾಜಕೀಯದಲ್ಲಿ ಆಸಕ್ತಿ ಬೆಳೆಸಿಕೊಂಡಿದ್ದ ಇವರು ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಪರ ಪ್ರಚಾರ ನಡೆಸಿದ್ದರು. ಆದರೆ ಏಕಾಏಕಿ ಆತ್ಮಹತ್ಯೆ ನಿರ್ಧಾರಕ್ಕೆ ಕಾರಣ ತಿಳಿದುಬಂದಿಲ್ಲ.

ದಾವಣಗೆರೆ ವಿದ್ಯಾನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Advertisement

Leave a reply

Your email address will not be published. Required fields are marked *

error: Content is protected !!