ದೇಶದ ಅತ್ಯಂತ ಕಿರಿಯ ಪೈಲಟ್ ಆದ ವಿಜಯಪುರದ ಸಮೈರಾ
ವಿಜಯಪುರ : ವಿಜಯಪುರಲ್ಲಿ ಹುಟ್ಟಿ ಬೆಳೆದ ಯುವತಿ ಸಧ್ಯ ಬಾಣೆತ್ತರದಲ್ಲಿ ಹಾರಾಡಲು ಸಿದ್ದಳಾಗಿದ್ದಾಳೆ. ಇವರ ಸಾಧನೆಗೆ ಈಗ ಗುಮ್ಮಟನಗರಿ ಜನ ಕೊಂಡಾಡುತ್ತಿದ್ದಾರೆ. ಮನಸ್ಸು ಮಾಡಿದರೆ ಯಾವದನ್ನಾದರೂ ಸಾಧಿಸಿ ತೋರಿಸಬಹುದು ಎಂದು ಸಮೈರಾ ಹುಲ್ಲೂರು.
18 ವರ್ಷದ ಸಮೈರಾ ಹುಲ್ಲೂರು ಕಮರ್ಶಿಯಲ್ ಪೈಲಟ್ ಲೈಲೆನ್ಸ್ ಪಡೆಯುವ ಮೂಲಕ ಅಭೂತಪೂರ್ವ ಸಾಧನೆಗೈದಿದ್ದಾರೆ. ಈ ಸಾಧನೆಯಿಂದ ಕುಟುಂಬದಲ್ಲಿ ಸಂತೋಷ ಮನೆ ಮಾಡಿದೆ. ಇತಿಹಾಸ ಸೃಷ್ಟಿಸಿರುವ ಸಮೈರಾ ವಿಜಯಪುರ ಜಿಲ್ಲೆ ಮಾತ್ರವಲ್ಲದೇ ರಾಜ್ಯದ ಕೀರ್ತಿಯ ಪತಾಕೆಯನ್ನು ಹಾರಿಸಿದ್ದಾರೆ.
ತಮ್ಮ ಶಿಕ್ಷಣವನ್ನು ವಿಜಯಪುರದಲ್ಲಿ ಮುಗಿಸಿ, 6 ತಿಂಗಳ ಕಾಲ ದೆಹಲಿಯಲ್ಲಿ ಪೈಲಟ್ ಟ್ರೇನಿಂಗ್ ಮುಗಿಸಿ 18ನೇ ವಯಸ್ಸಿಗೆ ಪೈಲಟ್ ಆಗಿ ಹೊರಹೊಮ್ಮಿದ್ದಾರೆ. 25ನೇ ವಯಸ್ಸಿಗೆ ಪೈಲಟ್ ಆಗಿರುವ ಕ್ಯಾಪ್ಟನ್ ತಪೇಶ್ ಕುಮಾರ್ ಇವರ ಈ ಸಾಧನೆಗೆ ಪ್ರೇರಣೆಯಾಗಿದ್ದಾರೆ.
ಸಮೈರಾಳ ಸಾಧನೆಗೆ ಜಿಲ್ಲೆ, ರಾಜ್ಯ ಹಾಗೂ ದೇಶದ ಹಲವೆಡೆಯಿಂದ ಶುಭಾಶಯಗಳ ಮಹಾಪೂರ ಹರಿದು ಬರುತ್ತಿದೆ. ಹೆಣ್ಣು ಮಕ್ಕಳನ್ನು ಕಡೆಗಣೆಸುವ ಜನರಿಗೆ ಸಮೈರಾ ಕುಟುಂಬ ಮಾದರಿ ಆಗಿದೆ. ಜೊತೆಗೆ ಇಂದಿನ ಕಾಲದ ಯುವ ಪೀಳಿಗೆಗೆ ಸಮೈರಾ ಸಾಧನೆ ಪ್ರೇರಣೆ ಆಗಿದೆ.


