ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ನಿಧನ ; ಗಣ್ಯರ ಸಂತಾಪ
ಬೆಂಗಳೂರು : ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ (93 ) ಅವರು ತಮ್ಮ ಬೆಂಗಳೂರಿನ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.
ಕರ್ನಾಟಕ ಮುಖ್ಯಮಂತ್ರಿಯಾಗಿ ಇವರು ಮಾಡಿರುವ ಸೇವೆಯನ್ನು ಎರಡೂ ದಶಕಗಳ ನಂತರವೂ ಜನ ಇನ್ನೂ ಮರೆತಿಲ್ಲ. ಐ.ಟಿ ಕ್ಷೇತ್ರದಲ್ಲಿ ಬೆಂಗಳೂರು ನಗರವನ್ನು ಇಡೀ ಜಗತ್ತೇ ಗುರುತಿಸುವಂತೆ ಮಾಡಿದ್ದು ಎಸ್.ಎಂ ಕೃಷ್ಣ.
ಕರ್ನಾಟಕದ ಹತ್ತನೇ ಮುಖ್ಯಮಂತ್ರಿಯಾಗಿ, ದೇಶದ ವಿದೇಶಾಂಗ ಸಚಿವರಾಗಿ, ಮಾಹಾರಷ್ಟ್ರದ ರಾಜ್ಯಪಾಲರಾಗಿ ಮತ್ತು ಭಾರತದ ರಾಜಕಾರಣದಲ್ಲಿ ಇನ್ನೂ ಅನೇಕ ಜವಾಬ್ದಾರಿಗಳನ್ನು ವಹಿಸಿ ಛಾಪು ಮೂಡಿಸಿದ್ದ ಎಸ್ಎಂ ಕೃಷ್ಣ ಅಪರೂಪದ ರಾಜಕಾರಣಿ ಎನಿಸಿಕೊಂಡಿದ್ದರು.
ಎಸ್ ಎಂ ಕೃಷ್ಣ ನಿಧನಕ್ಕೆ ಗಣ್ಯರು ಕಂಬನಿ ಮಿಡಿದಿದ್ದಾರೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಮಾಜಿ ಸಿಎಂ ಯಡಿಯೂರಪ್ಪ, ಕುಮಾರಸ್ವಾಮಿ, ಸದಾನಂದಗೌಡ, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೇರಿದಂತೆ ಅನೇಕರು ಅಗಲಿಗ ನಾಯಕನಿಗೆ ಸಂತಾಪ ಸೂಚಿಸಿದ್ದಾರೆ.

