ಸಿ.ಟಿ ರವಿಗೆ ಜಾಮೀನು ನೀಡಿದ ಹೈಕೋರ್ಟ್
ಬೆಳಗಾವಿ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಕೆ ಮಾಡಿದ್ದ ಆರೋಪದಲ್ಲಿ ಬಂಧನಕ್ಕ ಒಳಗಾಗಿದ್ದ ಪರಿಷತ್ ಸದಸ್ಯ ಸಿ.ಟಿ ರವಿ ಅವರಿಗೆ ಜಾಮೀನು ನೀಡಿ ಹೈಕೋರ್ಟ್ ಆದೇಶ ನೀಡಿದೆ.
ಅಶ್ಲೀಲ ಪದ ಬಳಕೆ ವಿಚಾರವಾಗಿ ಬೆಳಗಾವಿಯ ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ನಂತರ ಸಿ.ಟಿ ರವಿ ಅವರನ್ನು ಬಂಧಿಸಿ ಬೆಳಗಾವಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.
ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಪ್ರಕರಣ ಹಸ್ತಾಂತರ ಮಾಡಿ ಬೆಳಗಾವಿ ಎಮ್ಎಫ್ ಸಿ ಕೋಟ್೯ ಶುಕ್ರವಾರ ಮಧ್ಯಾಹ್ನ ಆದೇಶ ನೀಡಿತ್ತು. ಈ ಹಿನ್ನಲೆಯಲ್ಲಿ ಬೆಂಗಳೂರಿಗೆ ಸಿ.ಟಿ ರವಿ ಅವರನ್ನು ಪೊಲೀಸರು ಕರೆದೊಯ್ಯುತ್ತಿದ್ದರು.
ಸಧ್ಯ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ಇದ್ದು ಶನಿವಾರ ಆದೇಶ ಹೊರಬರಲಿದೆ. ಆ ಮಧ್ಯೆ ಹೈಕೋರ್ಟ್ ಷರತ್ತು ಬದ್ಧ ಜಾಮೀನು ನೀಡಿ ಆದೇಶ ಹೊರಡಿಸಿದೆ.


