ನಾಳೆ ನಡೆಯಬೇಕಿದ್ದ ಕಾಂಗ್ರೆಸ್ ಕಾರ್ಯಕ್ರಮ ರದ್ದು : ಡಿ.ಕೆ ಶಿವಕುಮಾರ್
ಡಾ. ಮನಮೋಹನ್ ಸಿಂಗ್ ಅವರ ನಿಧನದ ಹಿನ್ನಲೆಯಲ್ಲಿ ಅವರಿಗೆ ಸಂತಾಪ ಸೂಚಿಸುವುದು ನಮ್ಮ ಕರ್ತವ್ಯ. ಈ ಹಿನ್ನಲೆಯಲ್ಲಿ ಶುಕ್ರವಾರ ನಡೆಯಬೇಕಿದ್ದ ಗಾಂಧಿ ಕಾರ್ಯಕ್ರಮ ರದ್ದುಪಡಿಸಲಾಗಿದ್ದು, ಹೆಚ್ಚಿನ ವಿವರವನ್ನು ಮುಂದಿನ ದಿನಗಳಲ್ಲಿ ನೀಡುವೆ. ಎಂದು ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ಮಾಜಿ ಪ್ರಧಾನಿ ಹಾಗೂ ಖ್ಯಾತ ಆರ್ಥಿಕ ತಜ್ಞ ಡಾ. ಮನಮೋಹನ್ ಸಿಂಗ್ ( 92 ) ನಿಧನರಾಗಿದ್ದಾರೆ. ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಸಂಜೆ 9 ಗಂಟೆಗೆ ನಿಧನ ಹೊಂದಿದರು ಎಂದು ವೈದ್ಯಕೀಯ ಮೂಲಗಳು ತಿಳಿಸಿವೆ.


