Select Page

Advertisement

ಭೀಕರ ರಸ್ತೆ ಅಪಘಾತ ; ಹೆಸ್ಕಾಂ ಇಂಜಿನಿಯರ್ ತಾಯಿ ಸಾವು

ಭೀಕರ ರಸ್ತೆ ಅಪಘಾತ ; ಹೆಸ್ಕಾಂ ಇಂಜಿನಿಯರ್ ತಾಯಿ ಸಾವು

ಚಿಕ್ಕೋಡಿ : ಸರ್ಕಾರಿ ಬಸ್ ಹಾಗೂ ಕಾರಿನ ಮಧ್ಯೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಶನಿವಾರ ನಿಪ್ಪಾಣಿ ಮುಧೋಳ ರಾಜ್ಯ ಹೆದ್ದಾರಿಯಲ್ಲಿ ಸಂಭವಿಸಿದೆ.

ಬೆಳಗಾವಿ ಜಿಲ್ಲೆಯ ರಾಯಬಾಗ ಪಟ್ಟಣದ ನಿರ್ಮಲ ಅವಟೆ (60) ಮೃತಪಟ್ಟ ಮಹಿಳೆ. ಕಾರು ಚಲಾಯಿಸುತ್ತಿದ್ದ ಚಿಕ್ಕೋಡಿ ಹೆಸ್ಕಾಂ ಉಪವಿಭಾಗ ಸಹಾಯಕ ಅಭಿಯಂತರ ನೇಮಿನಾಥ ಅವಟೆ (43) ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಚಿಕ್ಕೋಡಿ ಪಟ್ಟಣದ ಯಾದವ ನಗರದಲ್ಲಿ ವಾಸಿಸವಿದ್ದ ಇವರು ಕಾರಿನಲ್ಲಿ ಸಂಚರಿಸುವ ವೇಳೆ ಉಮರಾಣಿ ಹತ್ತಿರ ನಿಪ್ಪಾಣಿ ಮುಧೋಳ ರಾಜ್ಯ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಗಾಯಗೊಂಡ ನೇಮಿನಾಥ ಅವರಿಗೆ‌ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಘಟನಾ ಸ್ಥಳಕ್ಕೆ ಚಿಕ್ಕೋಡಿ ಪೊಲೀಸ್ ಠಾಣೆ ಡಿವೈಎಸ್ಪಿ ಗೋಪಾಲಕೃಷ್ಣ ಗೌಡರ, ಸಿಪಿಐ ವಿಶ್ವನಾಥ್ ಚೌಗಲಾ, ಸಂಚಾರಿ ಪೊಲೀಸ್ ಠಾಣೆಯ ಪಿಎಸ್ಐ ರೂಪಾ ಗುಡೋಡ್ಗಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Leave a reply

Your email address will not be published. Required fields are marked *

error: Content is protected !!