ಮಧುಗಿರಿ : ದೂರು ನೀಡಲು ಬಂದ ಮಹಿಳೆಯೊಂದಿಗೆ ಡಿವೈಎಸ್ ಪಿ ಅಸಭ್ಯವಾಗಿ ವರ್ತಿಸಿರುವ ವಿಡಿಯೋ ವೈರಲ್ ಆಗಿದೆ.

ಮಧುಗಿರಿ ಡಿವೈಎಸ್ಪಿ ರಾಮಚಂದ್ರಪ್ಪನವರು ಪಾವಗಡದಿಂದ ಜಮೀನು ವ್ಯಾಜ್ಯದ ಬಗ್ಗೆ ದೂರು ಕೊಡಲು ಬಂದ ಮಹಿಳೆಯನ್ನು ತನ್ನ ಕಚೇರಿಯಲ್ಲಿನ ಶೌಚಾಲಯದಲ್ಲಿ ಕರೆದುಕೊಂಡು ಹೋಗಿದ್ದು ಆಕೆಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆ.

ಇದನ್ನು ಕೆಲವರು ಮೊಬೈಲ್ ನಲ್ಲಿ ಚಿತ್ರೀಕರಣ ಮಾಡಿಕೊಂಡಿದ್ದಾರೆ. ಡಿವೈಎಸ್ಪಿ ರಾಮಚಂದ್ರಪ್ಪನವರ ವಿರುದ್ದ ಸಾರ್ವಜನಿಕ ವಲಯದಲ್ಲಿ ಆಕ್ರೋಶ ಕೇಳಿ ಬಂದಿದ್ದು, ಘಟನೆಯಿಂದ ಪೊಲೀಸ್ ಇಲಾಖೆ ತಲೆ ತಗ್ಗಿಸುವಂತಾಗಿದೆ

ಜಮೀನು ವ್ಯಾಜ್ಯದ ಬಗ್ಗೆ ಪಾವಗಡ ಮೂಲದ ಮಹಿಳೆಯೊಬ್ಬರು ದೂರು ನೀಡಿದ್ದರು. ಈ ಸಂಬಂಧ ವಿಚಾರಿಸುವ ಸಲುವಾಗಿ ಮಹಿಳೆಯನ್ನು ಡಿವೈಎಸ್‌ಪಿ ಕಚೇರಿಗೆ ಕರೆಸಲಾಗಿತ್ತು. ಈ ವೇಳೆ ಮಹಿಳೆಯನ್ನು ಪುಸಲಾಯಿಸಿದ ರಾಮಚಂದ್ರಪ್ಪ ಆಕೆಯನ್ನು ಕಚೇರಿಯ ಶೌಚಾಲಯದ ಬಳಿ ಕರೆದುಕೊಂಡು ಹೋಗಿ ಲೈಂಗಿಕ ಕ್ರಿಯೆ ಶುರುಮಾಡಿದ್ದಾರೆ.

ಇನ್ನು ಮಹಿಳೆ ಜೊತೆ ಡಿವೈಎಸ್‌ಪಿ ರಾಮಚಂದ್ರಪ್ಪ ಬಲವಂತವಾಗಿ ನಡೆದುಕೊಳ್ಳುತ್ತಿದ್ದುದ್ದನ್ನು ಸೆರೆ ಹಿಡಿದ ವ್ಯಕ್ತಿಯೊಬ್ಬರು ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ್ದಾರೆ.