ಸಚಿವೆ ಹೆಬ್ಬಾಳಕರ್ ಆರೋಗ್ಯ ವಿಚಾರಿಸಿದ ಸತೀಶ್ ಜಾರಕಿಹೊಳಿ ; ಏನು ಹೇಳಿದ್ರು ಸಾಹುಕಾರ್…?
ಬೆಳಗಾವಿ : ರಸ್ತೆ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರನ್ನು ಬೆಳಗಾವಿ ಉಸ್ತುವಾರಿ ಹಾಗೂ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಭೇಟಿನೀಡಿ ಆರೋಗ್ಯ ವಿಚಾರಿಸಿದರು.
ಗುರುವಾರ ರಾತ್ರಿ ಬೆಂಗಳೂರಿನಿಂದ ಬೆಳಗಾವಿಗೆ ಬಂದಿಳಿದ ಅಚಿವ ಸತೀಶ್ ಜಾರಕಿಹೊಳಿ ನಗರದ ವಿಜಯಾ ಆಸ್ಪತ್ರೆಗೆ ಭೇಟಿನೀಡಿ ಚಿಕಿತ್ಸೆ ಪಡೆಯುತ್ತಿರುವ ಸಚಿವೆ ಹೆಬ್ಬಾಳಕರ್ ಆರೋಗ್ಯ ವಿಚಾರಿಸಿದರು.
ಈ ಸಂದರ್ಭದಲ್ಲಿ ಪ್ರತಿಕ್ರಿಯೆ ನೀಡಿದ ಇವರು. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆರೋಗ್ಯವಾಗಿದ್ದಾರೆ. ಆದಷ್ಟು ಬೇಗ ಹುಷಾರಗಲಿ. ಚೇತರಿಸಿಕೊಳ್ಳಲು ಸಮಯಾವಕಾಶ ಬೇಕು ಎಂದು ವೈದ್ಯರು ಹೇಳಿದ್ದಾರೆ.
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಕಳೆದ ಮಂಗಳವಾರ ಅವರ ಕಾರು ಅಪಘಾತವಾಗಿತ್ತು. ವೈದ್ಯರು ಸೂಚನೆ ಮೇರಗೆ ಇನ್ನೊಂದು ಮೂರನ್ನಾಲ್ಕು ದಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಯಲ್ಲಿ ವಿಶ್ರಾಂತಿ ಪಡೆಯಬೇಕು. ಆದಷ್ಟು ಬೇಗ ಗುಣಮುಖರಾಗಲಿದ್ದಾರೆ ಎಂದರು.


