ಮಹಾ ಕುಂಬಮೇಳದಲ್ಲಿ ಕಾಲ್ತುಳಿತ ; ಪರಿಸ್ಥಿತಿ ಆಲಿಸಿದ ಪ್ರಧಾನಿ ಮೋದಿ
ಪ್ರಯಾಗರಾಜ್ : ಮೌನಿ ಅಮವಾಸ್ಯೆ ಹಿನ್ನಲೆಯಲ್ಲಿ ಪ್ರಯಾಗರಾಜ್ ನ ಮಹಾ ಕುಂಭಮೇಳದಲ್ಲಿ (Mahakumbh 2025). ಇಂದು ನೆರವೇರಲಿದ್ದ ಶಾಹಿ ಸ್ಥಾನದ ಅಂಗವಾಗಿ ಆಗಮಿಸಿದ್ದ ಕೋಟ್ಯಾಂತರ ಭಕ್ತರು ನಡುವೆ ಕಾಲ್ತುಳಿತ ಸಂಭವಿಸಿದ ವರದಿಯಾಗಿದೆ.
ಘಟನೆಯಲ್ಲಿ ಕನಿಷ್ಠ 15 ಮಂದಿ ಮೃತಪಟ್ಟಿದ್ದಾರೆ ಎನ್ನಲಾಗಿದ್ದು, ಗಾಯಗೊಂಡ ಹಲವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಆಂಬ್ಯುಲೆನ್ಸ್ ಮತ್ತು ಅಧಿಕಾರಿಗಳು ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಿಗಿಸಿಕೊಂಡಿವೆ.
ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಕರೆ ಮಾಡಿ ಪರಿಸ್ಥಿತಿ ಅವಲೋಕಿಸಿದ್ದಾರೆ. ಅಗತ್ಯವಿರುವ ಎಲ್ಲ ನೆರವು ನೀಡುವುದಾಗಿ ತಿಳಿಸಿದ್ದಾರೆ.
ಇನ್ನು ಜನಸಂದಣಿಯಿಂದಾಗಿ ಆಂಬ್ಯುಲೆನ್ಸ್ ಸಂಚಾರಕ್ಕೂ ತೊಂದರೆಯಾಗಿದೆ. ಎಲ್ಲ ರಸ್ತೆಗಳಲ್ಲೂ ಜನಜಂಗುಳಿ ಕಾಣಿಸುತ್ತಿದೆ. ಸ್ನಾನಘಟ್ಟದ ಬಳಿ ನೆರೆದಿದ್ದ ಜನಜಂಗುಳಿಯಿಂದ ಕೆಲ ಮಹಿಳೆಯರು ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ.
ಮಹಾಕುಂಭದಲ್ಲಿ ನೆರೆದಿದ್ದ ಅಪಾರ ಭಕ್ತರಿಂದಾಗಿ ಪರಿಸ್ಥಿತಿ ಹತೋಟಿ ತಪ್ಪಿದೆ. ಕೆಲವರು ಬ್ಯಾರಿಕೇಡ್ ಮುರಿದು ಒಮ್ಮೆಲೆ ಒಳನುಗ್ಗಿದ್ದರಿಂದ ಮುಂಜಾನೆ 2.30ರ ವೇಳೆಗೆ ಕಾಲ್ತುಳಿತ ಸಂಭವಿಸಿದೆ ಎಂದು ಮೂಲಗಳು ತಿಳಿಸಿವೆ.


