ಯರಗಟ್ಟಿ : ಚಲಿಸುತ್ತಿದ್ದ ಬಸ್ ಹರಿದು ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಸೋಮವಾರ ಪಟ್ಟಣದ ಬಸ್ ನಿಲ್ದಾಣದಲ್ಲಿ ನಡೆದಿದೆ.
ಸದೆಪ್ಪ ಹರಿಜನ್( 62) ಮೃತ ದುರ್ದೈವಿ. ಯರಗಟ್ಟಿ ಬಸ್ ನಿಲ್ದಾಣದಲ್ಲಿ ಬಸ್ ಹರಿದ ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದು, ಸ್ಥಳಕ್ಕೆ ಯರಗಟ್ಟಿ ಪಿಎಸ್ಐ ಎಲ್. ಬಿ. ಮಾಳಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.