ಅಥಣಿ : ಭೀಕರ ರಸ್ತೆ ಅಪಘಾತ ; ಶಿಕ್ಷಕ ಸ್ಥಳದಲ್ಲೇ ಸಾವು
ಅಥಣಿ : ಪಟ್ಟಣದ ಸಾಯಿ ಮಂದಿರ ಹತ್ತಿರ ಎರಡು ಬೈಕುಗಳ ನಡುವೆ ನಡೆದ ರಸ್ತೆ ಅಪಘಾತದಲ್ಲಿ ಅಥಣಿ ವಿದ್ಯಾವರ್ಧಕ ಶಿಕ್ಷಣ ಸಂಸ್ಥೆಯ ಶಿಕ್ಷಕ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಬುಧವಾರ ಮಧ್ಯಾಹ್ನ ನಡೆದಿದೆ.
ಮೃತಪಟ್ಟ ಶಿಕ್ಷಕನನ್ನು ಸಾತಪ್ಪ ಪಿ. ಪಿರಗೊಂಡ(55) ಎಂದು ಗುರುತಿಸಲಾಗಿದ್ದು, ಮೃತರಿಗೆ ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರಿ ಇದ್ದಾಳೆ. ಮೃತಪಟ್ಟ ಶಿಕ್ಷಕನ ಅಂತ್ಯಕ್ರಿಯೆ ಅವರ ಸ್ವಗ್ರಾಮ ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಹಿಂಗನಿ ಗ್ರಾಮದಲ್ಲಿ ತಡರಾತ್ರಿ ಜರುಗಿತು.
ಮೃತ ಶಿಕ್ಷಕನಿಗೆ ಅಥಣಿ ವಿದ್ಯಾವರ್ಧಕ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿಯ ಸರ್ವ ಸದಸ್ಯರು ಹಾಗೂ ಶಿಕ್ಷಕರು, ವಿದ್ಯಾರ್ಥಿಗಳು ಆಪ್ತಮಿತ್ರರು ಸಂತಾಪ ಸೂಚಿಸಿ ಕಂಬನಿ ಮಿಡಿದರು.


