ಬೆಳಗಾವಿ : ನನಗೆ ಮರಾಠಿ ಬರಲ್ಲ ಕನ್ನಡ ಮಾತಾಡಿ ಎಂದಿದ್ದಕ್ಕೆ ಕೋಪಗೊಂಡು ಬಸ್ ಕಂಡೆಕ್ಟರ್ ಮೇಲೆ ಹಲ್ಲೆ ನಡೆಸಿರುವ ಘಟನೆ ಬೆಳಗಾವಿ ನಗರದ ಹೊರವಲಯದಲ್ಲಿ ನಡೆದಿದೆ.

ಬೆಳಗಾವಿ ನಗರದಿಂದ ಸುಳೇಬಾವಿ ಕಡೆಗೆ ಹೊರಟಿದ್ದ ರಾಜ್ಯ ರಸ್ತೆ ಸಾಗಿಗೆ ಬಸ್ ನಲ್ಲಿ ಟಿಕೆಟ್ ವಿಚಾರವಾಗಿ ಪ್ರಯಾಣಿಕರು ಹಾಗೂ ಕಂಡಕ್ಟರ್ ಮಧ್ಯೆ ಮಾತಿನ ಚಕಮಕಿ‌ ನಡೆದಿದೆ.‌

ಇಷ್ಟೇ ಕಾರಣಕ್ಕೆ ಕಂಡಕ್ಟರ್ ಮೇಲೆ ಎಗರಿದ ಗುಂಪು ಹಲ್ಲೆಗೆ ಮುಂದಾಗಿದೆ. ಕನ್ನಡ ಮಾತನಾಡಲು ಬರುವುದಿಲ್ಲ ಎಂದು ಹೇಳಿದ್ದಕ್ಕೆ ಈ ಗುಂಪು ದಾಳಿ‌ ಮಾಡಿದೆ ಎಂದು ಕಂಡಕ್ಟರ್ ಹೇಳಿದ್ದಾರೆ.

ಈ ಕುರಿತು ಮಹಾದೇವ್ ಹುಕ್ಕೇರಿ ಎಂಬುವವರು ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.