ಕಂಡಕ್ಟರ್ ಮೇಲೆ ಹಲ್ಲೆ ; ಮೂವರು ಮರಾಠಿ ಪುಂಡರ ಬಂಧನ
ಬೆಳಗಾವಿ : ಕನ್ನಡ ಮಾತನಾಡದಿದ್ದಕ್ಕೆ ಬಸ್ ಕಂಡಕ್ಟರ್ ಮೇಲೆ ಮರಾಠಿ ಪುಂಡರು ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.
ಬಾಳೇಕುಂದ್ರಿ ಗ್ರಾಮದಲ್ಲಿ ಶುಕ್ರವಾರ ಬಸ್ ಚಾಲಕ ಹಾಗೂ ನಿರ್ವಾಹಕನ ಮೇಲೆ ಹಲ್ಲೆ ಮಾಡಲಾಗಿತ್ತು. ಸಧ್ಯ ಈ ಪ್ರಕರಣ ರಾಜ್ಯಾದ್ಯಂತ ಸದ್ದು ಮಾಡುತ್ತಿದ್ದು ಚಿತ್ರದುರ್ಗದಲ್ಲಿಯೂ ಆಕ್ರೋಶ ವ್ಯಕ್ತವಾಗಿದೆ.
ಪುಂಡಾಟ ಮೆರೆದ ಮೂವರು ಯುವಕರನ್ನು ಬಂಧಿಸಿ ಕೋರ್ಟ್ ಗೆ ಹಾಜರುಪಡಿಸಿದ್ದು 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಲಾದ ಹಿನ್ನಲೆಯಲ್ಲಿ ಅವರನ್ನು ಹಿಂಡಲಗಾ ಜೈಲಿಗೆ ಸ್ಥಳಾಂತರ ಮಾಡಲಾಗಿದೆ.


