Select Page

Advertisement

ಕಂಡಕ್ಟರ್ ಮೇಲೆ ಹಲ್ಲೆ ಪ್ರಕರಣ ; ಮಾರಿಹಾಳ ಠಾಣೆ ಇನ್ಸ್ಪೆಕ್ಟರ್ ವರ್ಗಾವಣೆ

ಕಂಡಕ್ಟರ್ ಮೇಲೆ ಹಲ್ಲೆ ಪ್ರಕರಣ ; ಮಾರಿಹಾಳ ಠಾಣೆ ಇನ್ಸ್ಪೆಕ್ಟರ್ ವರ್ಗಾವಣೆ

ಬೆಳಗಾವಿ : ಕಂಡಕ್ಟರ್ ಮೇಲೆ ಮರಾಠಿ ಪುಂಡರಿಂದ ಹಲ್ಲೆ ಪ್ರಕರಣದಲ್ಲಿ ಕರ್ತವ್ಯಲೋಪ ಎಸಗಿದ್ದ ಆರೋಪದಲ್ಲಿ ಮಾರಿಹಾಳ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಜೆ.ಐ ಕಲ್ಯಾನಶೆಟ್ಟಿ ಅವರನ್ನು ವರ್ಗಾವಣೆ ಮಾಡಲಾಗಿದೆ.‌

ಬಾಳೇಕುಂದ್ರಿ ಗ್ರಾಮದಲ್ಲಿ ಬಸ್ ಕಂಡಕ್ಟರ್ ಮೇಲೆ ಮರಾಠಿ ಪುಂಡರು ಹಲ್ಲೆ ನಡೆಸಿದ್ದರು. ನಂತರ ಹಲ್ಲೆಗೊಳಗಾದ ನಿರ್ವಾಹಕ ಮಹಾದೇವ ಹುಕ್ಕೇರಿ ಬಸ್ ಸಮೇತವಾಗಿ ಮಾರಿಹಾಳ ಪೊಲೀಸ್ ಠಾಣೆಗೆ ಬಂದು ದೂರು ದಾಖಲಿಸಲು‌ ಮುಂದಾಗಿದ್ದರು. ಆದರೆ ಠಾಣೆಯ ಇನ್ಸ್ಪೆಕ್ಟರ್ ದೂರು ದಾಖಲಿಸಿಕೊಳ್ಳದೆ ವಾಪಸ್ ಕಳುಹಿಸಿದ್ದರು.

ಇನ್ನೂ ಕಂಡಕ್ಟರ್ ಮೇಲೆ ಹಲ್ಲೆ ಪ್ರಕರಣದ ಕಿಚ್ಚಿಗೆ ಮತ್ತಷ್ಟು ಬೆಂಕಿ ಹಚ್ಚಿದ್ದು ಪೋಕ್ಸೊ ಪ್ರಕರಣ. ಹಲ್ಲೆ ಮಾಡಿದ್ದ ಪುಂಡರು ಪ್ರಕರಣದ ದಿಕ್ಕು ತಪ್ಪಿಸಲು ಯುವತಿ ಕಡೆಯಿಂದ ಪೋಕ್ಸೊ ಪ್ರಕರಣ ದಾಖಲಿಸಲಾಗಿತ್ತು.

ಸಧ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿ.ಐ ಕಲ್ಯಾನಶೆಟ್ಟಿ ವರ್ಗಾವಣೆಯಿಂದ ತೆರವಾದ ಸ್ಥಾನಕ್ಕೆ ಸಿಸಿಆರ್ ಬಿ ಘಟಕದ ಇನ್ಸ್ಪೆಕ್ಟರ್ ಮಂಜುನಾಥ ನಾಯಕ ಅವರನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಲಾಗಿದೆ.

Advertisement

Leave a reply

Your email address will not be published. Required fields are marked *

error: Content is protected !!