ಬಿಜೆಪಿಯತ್ತ ಮುಖ ಮಾಡಿದ್ರಾ ಡಿಕೆಶಿ ; ಅಚ್ಚರಿ ಮೂಡಿಸಿದ ಚಾಣಕ್ಯನ ಭೇಟಿ….!
ಬೆಂಗಳೂರು : ಕಾಂಗ್ರೆಸ್ ಪಕ್ಷದ ಕಟ್ಟಾಳು, ಮುಂದಿನ ಮುಖ್ಯಮಂತ್ರಿ ಕನಸು ಹೊತ್ತ ಡಿ.ಕೆ ಶಿವಕುಮಾರ್ ನಡೆ ಸಾಕಷ್ಟು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ. ಒಂದು ಕಡೆ ಕಾಂಗ್ರೆಸ್ ಒಳಗೆ ಸಿಎಂ ಬದಲಾವಣೆ ಚರ್ಚೆ ನಡುವೆ, ಡಿಕೆಶಿ ಹಾದಿ ವಿಭಿನ್ನವಾಗಿ ಕಾಣುತ್ತಿದೆ.
ಕಾಂಗ್ರೆಸ್ ಹೈಕಮಾಂಡ್ ಮೂಲಗಳ ಪ್ರಕಾರ ಎರಡು ವರೆ ವರ್ಷಗಳ ನಂತರ ಸಿಎಂ ಸಿದ್ದರಾಮಯ್ಯ ತಮ್ಮ ಸ್ಥಾನವನ್ನು
ಡಿ.ಕೆ ಶಿವಕುಮಾರ್ ಅವರಿಗೆ ಕೊಡುವ ಕುರಿತು ಮಾತುಕತೆ ಆಗಿದ್ದು, ಇದಕ್ಕೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಸಾಕ್ಷಿ ಎಂದು ಹೇಳಲಾಗುತ್ತಿದೆ.
ಆದರೆ ಸಿಎಂ ಸಿದ್ದರಾಮಯ್ಯ ಅವರ ಬೆಂಬಲಿತ ನಾಯಕರು ಯಾವುದೇ ಕಾರಣಕ್ಕೂ ಸಿಎಂ ಸ್ಥಾನದ ಬದಲಾವಣೆ ಸಾಧ್ಯವಿಲ್ಲ ಎಂದು ಪಟ್ಟು ಹಿಡಿಯುವ ಮೂಲಕ ಡಿಕೆಶಿ ಆಸೆಗೆ ಅಡ್ಡಗಾಲು ಹಾಕಿತ್ತಿದ್ದಾರೆ. ಇವೆಲ್ಲವನ್ನೂ ಗಮನಿಸಿದರೆ ಸಿಎಂ ಸಿದ್ದರಾಮಯ್ಯ ಅಧಿಕಾರ ಬಿಟ್ಟುಕೊಡಲು ಸಾಧ್ಯವಿಲ್ಲ ಎಂದು ಹೇಳಲಾಗುತ್ತಿದೆ.
ಡಿಕೆಶಿ ನಿಗೂಢ ನಡೆ : ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸಿಎಂ ಹುದ್ದೆ ಮೇಲೆ ಕಣ್ಣಿಟ್ಟಿದ್ದು ಆಗಿನಿಂದಲೇ ಕಸರತ್ತು ಮುಂದುವರಿಸಿದ್ದಾರೆ. ಹೈಕಮಾಂಡ್ ನಾಯಕರನ್ನು ಭೇಟಿಯಾಗಿ ತಮ್ಮ ಅಭಿಪ್ರಾಯ ಹಂಚಿಕೊಳ್ಳುವ ಕೆಲಸ ಮಾಡುತ್ತಿದ್ದಾರೆ. ಈ ಮಧ್ಯೆ ನಿಗೂಢ ನಡೆ ಮೂಲಕ ಬಿಜೆಪಿಗರನ್ನು ಇಕ್ಕಟ್ಟಿಗೆ ಸಿಲುಕಿಸುವ ಕೆಲಸ ಮಾಡುತ್ತಿದ್ದಾರೆ.
ಚಾಣಕ್ಯ ಶಾ ಭೇಟಿ : ಇಶಾ ಫೌಂಡೇಶನ್ ಸಹಯೋಗದೊಂದಿಗೆ ಸದ್ಗುರು ಜಗ್ಗಿ ವಾಸುದೇವ ಅವರ ನೇತೃತ್ವದಲ್ಲಿ ನಡೆಯುವ ಶಿವರಾತ್ರಿ ಸಂಜೆ ಕಾರ್ಯಕ್ರಮದ ಹಿನ್ನಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸಿದ್ದು ಈ ಕಾರ್ಯಕ್ರಮಕ್ಕೆ ಡಿಕೆಶಿ ಭಾಗವಹಿಸಿ ಶಾ ಭೆಟಿ ಮಾಡುವ ಮೂಲಜ ಕಾಂಗ್ರೆಸ್ ಹೈಕಮಾಂಡ್ ಗೆ ಒಂದು ಸಂದೇಶ ರವಾನಿಸಿದ್ದಾರೆ.
ಇನ್ನೂ ಸಾಮಾಜಿಕ ಜಾಲತಾಣದಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಕಾಂಗ್ರೆಸ್ ತೊರೆದು ಬಿಜೆಪಿಗೆ ಬರುತ್ತಾರೆ ಎಂಬ ಮಾತು ಜೋರಾಗಿ ನಡೆದಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಭೇಟಿ ಹಿಂದೆ ರಾಜಕೀಯ ಲೆಕ್ಕಾಚಾರ ಅಡಗಿದೆ ಎಂಬುಕು ಕೆಲವರ ವಾದವಾಗಿದೆ.
ಒಟ್ಟಿನಲ್ಲಿ ಕಾಂಗ್ರೆಸ್ ಪಾಳೆಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಜೋರಾದ ಬೆನ್ನಲ್ಲೇ ಡಿ.ಕೆ ಶಿವಕುಮಾರ್ ಅವದ ನಡೆ ಸಾಕಷ್ಟು ಕುತೂಹಲ ಮೂಡಿಸಿದ್ದು ಮುಂದೆ ಇದು ಯಾವ ಹಾದಿ ಪಡೆಯುತ್ತದೆ ಎಂಬುದನ್ನು ಕಾದು ನೋಡಬೇಕು.


