Select Page

Advertisement

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರು ಅಪಘಾತ

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರು ಅಪಘಾತ

ಚಿಕ್ಕಮಗಳೂರು : ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರ ಕಾರಿಗೆ ಲಾರಿ ಡಿಕ್ಕಿ ಹೊಡೆದಿದೆ. ಈ ಭೀಕರ ಅಪಘಾತದಲ್ಲಿ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.

ಲಾರಿ ಕಾರಿನ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಕಾರು ಹಿಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರು ಚಾಲಕ ಸೇರಿದಂತೆ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಪೊಲೀಸರು ಲಾರಿಯನ್ನು ವಶಕ್ಕೆ ಪಡೆದು ಡ್ರೈವರ್​ ವಿರುದ್ಧ ಕೇಸ್​ ಮಾಡಿದ್ದಾರೆ.

ಇನ್ನು, ಪಕ್ಷದ ಕಡೆಯಿಂದ ವಿಜಯೇಂದ್ರ ಅವರಿಗೆ ನೀಡಲಾದ ಅಧಿಕೃತ ಕಾರು ಇದಾಗಿತ್ತು. ವಿಜಯೇಂದ್ರ ಅವರು ತಮ್ಮ ಪರ್ಸನಲ್​ ಕಾರಿನಲ್ಲಿ ಇದ್ದರು. ಪಕ್ಷ ನೀಡಿದ್ದ ಕಾರಿನಲ್ಲಿ ವಿಜಯೇಂದ್ರ ಅವರ ಫೋಟೋಗ್ರಾಫರ್​​ ಮತ್ತು ಪಿಎ ಸಂಚರಿಸುತ್ತಿದ್ದರು. ಚಿಕ್ಕಮಗಳೂರಿನಿಂದ ಶಿಖಾರಿಪುರ ತೆರಳುವ ವೇಳೆ ಆ್ಯಕ್ಸಿಡೆಂಟ್​ ಆಗಿದೆ.

Advertisement

Leave a reply

Your email address will not be published. Required fields are marked *

error: Content is protected !!