ಕಾಗವಾಡ : ಕಾಗವಾಡ ಶಾಸಕ ರಾಜು ಕಾಗೆ ಹಿರಿಯ ಪುತ್ರಿ ಅನಾರೋಗ್ಯದಿಂದ ನಿಧನರಾಗಿದ್ದಾರೆ.

ಅನಾರೋಗ್ಯ ಹಿನ್ನಲೆಯಲ್ಲಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೃತಿಕಾ ಪಾಟೀಲ ನಿಧನ ಹೊಂದಿದ್ದಾರೆ.

ನೇರ್ಲಿ ಗ್ರಾಮದ ನಿವಾಸಿ ಡಾ. ಅನಿಲ‌ ಪಾಟೀಲ ಧರ್ಮಪತ್ನಿ ಕೃತಿಕಾ. ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ನೇರ್ಲಿ ಗ್ರಾಮ. ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

ನಾಳೆ ಬೆಳಿಗ್ಗೆ 10 ಗಂಟೆಗೆ ಕಾಗವಾಡ ಶಾಸಕ ರಾಜು ಕಾಗೆ ಗ್ರಾಮ ಉಗಾರದಲ್ಲಿ ಅಂತ್ಯಕ್ರಿಯೆಗೆ ಸಕಲ ಸಿದ್ದತೆ. ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಉಗಾರ ಪಟ್ಟಣದಲ್ಲಿ ಅಂತ್ಯಕ್ರಿಯೆ ನಡೆಯಲಿದೆ